HEALTH TIPS

ಭಾರತ-ಪಾಕಿಸ್ತಾನ ಸಂಘರ್ಷದಲ್ಲಿ 11 ಯುದ್ಧ ವಿಮಾನ ನಾಶ: ಡೊನಾಲ್ಡ್‌ ಟ್ರಂಪ್‌

 ವಾಷಿಂಗ್ಟನ್‌: ಭಾರತ ಮತ್ತು ಪಾಕಿಸ್ತಾನ ನಡುವೆ ಕಳೆದ ವರ್ಷ ಮೇ ತಿಂಗಳಲ್ಲಿ ನಡೆದ ಸಂಘರ್ಷದಲ್ಲಿ 11 ಯುದ್ಧ ವಿಮಾನಗಳು ನಾಶವಾಗಿವೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿದ್ದಾರೆ. ಆದರೆ, ಈ ಯುದ್ಧ ವಿಮಾನಗಳು ಯಾವ ದೇಶಕ್ಕೆ ಸೇರಿದವು? ಎರಡೂ ಕಡೆ ಆದ ನಷ್ಟ ಎಷ್ಟು ಎಂಬುವುದರ ಬಗ್ಗೆ ಅವರು ಸ್ಪಷ್ಟಪಡಿಸಿಲ್ಲ. 


'ಉಭಯ ದೇಶಗಳ ನಡುವಿನ ಯುದ್ಧವನ್ನು ನಿಲ್ಲಿಸಿದ್ದು ನಾನೇ' ಎಂದು ಅವರು ಪುನರುಚ್ಚರಿಸಿದ್ದಾರೆ.

ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷ ಸೇರಿದಂತೆ ಎಂಟು ಯುದ್ಧಗಳನ್ನು ನಿಲ್ಲಿಸಿದ್ದಕ್ಕಾಗಿ ನನಗೆ ಎಲ್ಲರಿಗಿಂತ ಹೆಚ್ಚಿನ ನೊಬೆಲ್‌ ಶಾಂತಿ ಪ್ರಶಸ್ತಿ ಸಿಗಬೇಕಿತ್ತು ಎಂದು ಸುದ್ದಿಗಾರರಿಗೆ ಬುಧವಾರ ತಿಳಿಸಿದ್ದಾರೆ.

ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷವು ಅಣ್ವಸ್ತ್ರ ಯುದ್ಧವಾಗುತ್ತಿತ್ತು. ಈ ಸಂಘರ್ಷವನ್ನು ತಡೆಯುವ ಮೂಲಕ ಟ್ರಂಪ್‌ ಅವರು ಸುಮಾರು 5 ಕೋಟಿ ಜನರ ಪ್ರಾಣವನ್ನು ಉಳಿಸಿದ್ದಾರೆ ಎಂದು ಪಾಕಿಸ್ತಾನದ ಪ್ರಧಾನಿ ಶೆಹಬಾಜ್‌ ಷರೀಫ್‌ ಅವರು ಶ್ಲಾಘಿಸಿದ್ದಾರೆ ಎಂದು ಟ್ರಂಪ್ ಹೇಳಿದ್ದಾರೆ.

ಆದರೆ, ಮೂರನೇ ರಾಷ್ಟ್ರದ ಮಧ್ಯಸ್ಥಿಕೆಯನ್ನು ಭಾರತವು ನಿರಂತರವಾಗಿ ನಿರಾಕರಿಸುತ್ತಾ ಬಂದಿದೆ.

ಆಪರೇಷನ್‌ ಸಿಂಧೂರ ಸಮಯದಲ್ಲಿ ಪಾಕಿಸ್ತಾನದ ಎಫ್‌-16 ಜೆಟ್‌ ಸೇರಿದಂತೆ 12 ಯುದ್ಧವಿಮಾನಗಳು ನಾಶವಾಗಿವೆ ಎಂದು ಭಾರತ ಹೇಳಿತ್ತು.

ಪಹಲ್ಗಾಮ್‌ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ, ಪಾಕ್‌ ಆಕ್ರಮಿತ ಪ್ರದೇಶಗಳಲ್ಲಿನ ಭಯೋತ್ಪಾದಕರ ಅಡಗುತಾಣಗಳನ್ನು ಗುರಿಯಾಗಿಸಿ ಭಾರತವು 2025ರ ಮೇ 7ರಂದು 'ಆಪರೇಷನ್ ಸಿಂಧೂರ' ಕಾರ್ಯಾಚರಣೆ ನಡೆಸಿತ್ತು. 








ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries