ಡೆಹ್ರಾಡೂನ್: ಉತ್ತರಾಖಂಡದಾದ್ಯಂತ ಭಾನುವಾರ ಭಾರಿ ಮಳೆ ಸುರಿದಿದ್ದರಿಂದ ಅಲ್ಲಲ್ಲಿ ಭೂಕುಸಿತ ಸಂಭವಿಸಿದ್ದು ಎರಡು ರಾಷ್ಟ್ರೀಯ ಹೆದ್ದಾರಿಗಳು ಸೇರಿದಂತೆ 126 ರಸ್ತೆಗಳು ಬಂದ್ ಆಗಿವೆ.
ಡೆಹ್ರಾಡೂನ್‌ನಲ್ಲಿ ನಿರ್ಮಾಣ ಹಂತದಲ್ಲಿದ್ದ ಕಟ್ಟಡವೊಂದರ ಗೋಡೆಯು ಕುಸಿದು ಮಹಿಳೆಯೊಬ್ಬರು ಗಾಯಗೊಂಡಿದ್ದಾರೆ.
ಕಟ್ಟಡದ ಹತ್ತಿರದಲ್ಲಿ ವಾಸಿಸುತ್ತಿದ್ದ 7 ಕುಟುಂಬಗಳನ್ನು ಮುನ್ನೆಚ್ಚರಿಕೆಯಾಗಿ ಸ್ಥಳಾಂತರಿಸಲಾಗಿದೆ.
ಸ್ಯಾನಚಟ್ಟಿಯಲ್ಲಿ ಸಂಭವಿಸಿದ ಭೂಕುಸಿತದಿಂದ ಮೂರು ದಿನಗಳಿಂದ ಬಂದ್ ಆಗಿರುವ ಋಷಿಕೇಷ- ಯಮುನೋತ್ರಿ ಹೆದ್ದಾರಿಯಲ್ಲಿ ದುರಸ್ತಿ ಕಾರ್ಯಾಚರಣೆ ಮುಂದುವರಿದಿದೆ. ರಸ್ತೆಗಳ ಮೇಲಿನ ಅವಶೇಷಗಳನ್ನು ತೆರವುಗೊಳಿಸಲಾಗುತ್ತಿದೆ.

