HEALTH TIPS

12.73 ಲಕ್ಷ ವಾಹನ ಮಾರಾಟ

 ನವದೆಹಲಿ (PTI): ಬೇಡಿಕೆ ಹೆಚ್ಚಳದಿಂದ ಪ್ರಸಕ್ತ ಆರ್ಥಿಕ ವರ್ಷದ ಜೂನ್‌ ತ್ರೈಮಾಸಿಕದಲ್ಲಿ ದೇಶದಲ್ಲಿ 12.73 ಲಕ್ಷ ಪ್ರಯಾಣಿಕ ವಾಹನಗಳು ಮಾರಾಟವಾಗಿವೆ (ಕಂಪನಿಯಿಂದ ಡೀಲರ್‌ಗಳಿಗೆ) ಎಂದು ಭಾರತೀಯ ವಾಹನ ತಯಾರಕರ ಒಕ್ಕೂಟ (ಎಸ್‌ಐಎಎಂ) ಬುಧವಾರ ತಿಳಿಸಿದೆ. 


ಕಳೆದ ಆರ್ಥಿಕ ವರ್ಷದ ಇದೇ ತ್ರೈಮಾಸಿಕದಲ್ಲಿ 10.11 ಲಕ್ಷ ವಾಹನಗಳು ಮಾರಾಟವಾಗಿದ್ದವು.

ಇದಕ್ಕೆ ಹೋಲಿಸಿದರೆ ವಾಹನಗಳ ಮಾರಾಟ ಶೇ 25.9ರಷ್ಟು ಹೆಚ್ಚಳವಾಗಿದೆ ಎಂದು ತಿಳಿಸಿದೆ.

ದ್ವಿಚಕ್ರ ವಾಹನಗಳ ಮಾರಾಟದಲ್ಲಿ ಶೇ 20.3ರಷ್ಟು ಹೆಚ್ಚಳವಾಗಿದ್ದು, 56.28 ಲಕ್ಷ ವಾಹನಗಳು ಮಾರಾಟವಾಗಿವೆ. ಕಳೆದ ಆರ್ಥಿಕ ವರ್ಷದ ಜೂನ್ ತ್ರೈಮಾಸಿಕದಲ್ಲಿ 46.77 ಲಕ್ಷ ವಾಹನಗಳು ಮಾರಾಟವಾಗಿದ್ದವು.

ತ್ರಿಚಕ್ರ ವಾಹನಗಳ ಮಾರಾಟವು 1.65 ಲಕ್ಷದಿಂದ 2.14 ಲಕ್ಷಕ್ಕೆ ಹೆಚ್ಚಳವಾಗಿದೆ. ವಾಣಿಜ್ಯ ವಾಹನಗಳ ಮಾರಾಟದಲ್ಲಿ ಶೇ 18.3ರಷ್ಟು ಏರಿಕೆಯಾಗಿದ್ದು, 2.65 ಲಕ್ಷವಾಗಿದೆ ಎಂದು ತಿಳಿಸಿದೆ.

'ಪಶ್ಚಿಮ ಏಷ್ಯಾದ ಬಿಕ್ಕಟ್ಟಿನ ನಡುವೆಯೂ ಜಿಎಸ್‌ಟಿ ದರ ಇಳಿಕೆ, ಹೊಸ ಮಾದರಿಯ ವಾಹನಗಳ ಬಿಡುಗಡೆ ಸೇರಿದಂತೆ ವಿವಿಧ ಅಂಶಗಳು ವಾಹನಗಳ ಮಾರಾಟ ಹೆಚ್ಚಳಕ್ಕೆ ಕಾರಣವಾಗಿವೆ' ಎಂದು ಎಸ್‌ಐಎಎಂನ ಅಧ್ಯಕ್ಷ ಶೈಲೇಶ್ ಚಂದ್ರ ಹೇಳಿದ್ದಾರೆ.











ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries