ಕೀವ್: ಉಕ್ರೇನ್‌ನ ಕೀವ್ ನಗರದ ಮೇಲೆ ರಷ್ಯಾ ನಡೆಸಿದ ಕ್ಷಿಪಣಿ ಮತ್ತು ಡ್ರೋನ್ ದಾಳಿಯಲ್ಲಿ ಕನಿಷ್ಠ 17 ನಾಗರಿಕರು ಮೃತಪಟ್ಟಿದ್ದಾರೆ.
ತನ್ನ ತೈಲ ಸಂಸ್ಕರಣಾ ಘಟಕದ ಮೇಲೆ ಉಕ್ರೇನ್ ದಾಳಿ ನಡೆಸಿದ್ದು, ಅದಕ್ಕೆ ಪ್ರತಿಯಾಗಿ ಈ ದಾಳಿ ನಡೆಸಲಾಗಿದೆ ಎಂದು ರಷ್ಯಾ ತಿಳಿಸಿದೆ.
ಸುಮಾರು 11 ಗಂಟೆಗಳ ಕಾಲ ದಾಳಿ ನಡೆಸಿದ್ದು, 90 ಜನರು ಗಾಯಗೊಂಡಿದ್ದಾರೆ. ಭಾರಿ ಸ್ಪೋಟದ ಸದ್ದು ಕೇಳುತ್ತಲೇ ಅನೇಕರು ಸುರಕ್ಷಿತ ಸ್ಥಳಗಳಲ್ಲಿ ರಕ್ಷಣೆ ಪಡೆದುಕೊಂಡಿದ್ದಾರೆ. ದಾಳಿಗೆ ಕುಸಿದು ಬಿದ್ದ ಕಟ್ಟಡಗಳ ಅವಶೇಷಗಳಡಿ ಸಿಲುಕಿದವರ ರಕ್ಷಣೆಗೆ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ.
ತೈಲ ಸಂಸ್ಕರಣಾ ಘಟಕವನ್ನು ಗುರಿಯಾಗಿಸಿ ಇತ್ತೀಚೆಗೆ ಉಕ್ರೇನ್ ನಡೆಸಿದ ದಾಳಿಯಿಂದ ದೇಶದಲ್ಲಿ ತೀವ್ರ ಇಂಧನ ಕೊರತೆ ಉಂಟಾಗಿತ್ತು. ಇದು ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರ ಮೇಲೆ ಒತ್ತಡವನ್ನು ತಂದಿತ್ತು. ಇದಕ್ಕೆ ಪ್ರತಿಯಾಗಿ ಈ ದಾಳಿ ನಡೆಸಲಾಗಿದೆ ಎಂದು ರಷ್ಯಾದ ರಕ್ಷಣಾ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

