ಅಯೋಧ್ಯೆ: ರಾಮಮಂದಿರದಲ್ಲಿ ಹಣ ಮತ್ತು ಇತರ ಬೆಲೆಬಾಳುವ ವಸ್ತುಗಳು ಕಳವಾಗಿರುವ ಆರೋಪಗಳ ನಡುವೆಯೇ ಅರ್ಜಿ ಆಹ್ವಾನಿಸಲಾಗಿದೆ.
ಇದಕ್ಕೂ ಮುನ್ನ, ಸಿಇಒ ಅಧಿಕಾರ ಮತ್ತು ಜವಾಬ್ದಾರಿಗಳು ಏನು ಎಂಬುದನ್ನು ದೇವಾಲಯದ ಟ್ರಸ್ಟ್ ನಿರ್ಧಾರ ಮಾಡುತ್ತದೆ. ಇದರಲ್ಲಿ ಸರ್ಕಾರದ ಹಸ್ತಕ್ಷೇಪವೇನೂ ಇರುವುದಿಲ್ಲ ಎಂದು ರಾಮಮಂದಿರ ನಿರ್ಮಾಣ ಸಮಿತಿ ಅಧ್ಯಕ್ಷ ನೃಪೇಂದ್ರ ಮಿಶ್ರಾ ಹೇಳಿದ್ದರು.
'ಅಯೋಧ್ಯೆಗೆ ಭೇಟಿ ನೀಡುವ ಭಕ್ತರಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವುದು ಹಾಗೂ ದೇವಾಲಯ, ಟ್ರಸ್ಟ್ ಮೇಲೆ ಭಕ್ತರು ಹೊಂದಿರುವ ನಂಬಿಕೆಯನ್ನು ಎತ್ತಿ ಹಿಡಿಯುವುದು ಸಿಇಒ ಅವರ ಪ್ರಾಥಮಿಕ ಜವಾಬ್ದಾರಿಯಾಗಿರಲಿದೆ' ಎಂದು ಮಿಶ್ರಾ ಸುದ್ದಿಗಾರರಿಗೆ ತಿಳಿಸಿದ್ದರು.
ಸಿಇಒ ಹುದ್ದೆಗೆ ಸೂಕ್ತ ಅಭ್ಯರ್ಥಿಯನ್ನು ಶಿಫಾರಸು ಮಾಡಲು ಜುಲೈ 6ರಂದು ನಿವೃತ್ತ ನ್ಯಾಯಮೂರ್ತಿ ಪ್ರಮೋದ್ ಕೊಹ್ಲಿ, ನಿವೃತ್ತ ಲೆಫ್ಟಿನೆಂಟ್ ಜನರಲ್ ವಿಷ್ಣುಕಾಂತ್ ಚತುರ್ವೇದಿ ಮತ್ತು ಎನ್‌ಐಟಿ ರಾಯ್‌ಪುರದ ಮಾಜಿ ಅಧ್ಯಕ್ಷ ಸುರೇಶ್ ಹವಾರೆ ಅವರನ್ನೊಳಗೊಂಡ ಮೂವರು ಸದಸ್ಯರ ಸಮಿತಿಯನ್ನು ಟ್ರಸ್ಟ್ ರಚಿಸಿತ್ತು.

