HEALTH TIPS

ಇ20 ಪೆಟ್ರೋಲ್‌: ಮೆಟಾ, X ವಿರುದ್ಧ ಮೊಕದ್ದಮೆ ಹೂಡಲು ಗಡ್ಕರಿಗೆ ಕೋರ್ಟ್ ಅನುಮತಿ

ಮುಂಬೈ: ಇ20 ಪೆಟ್ರೋಲ್‌ ವಿವಾದದ ಕುರಿತಂತೆ ಡೀಪ್‌ಫೇಕ್‌ ವಿಡಿಯೊಗಳ ಮೂಲಕ ತಮ್ಮ ಕುಟುಂಬದ ವಿರುದ್ಧ ಸುಳ್ಳು ಮಾಹಿತಿ ಹರಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಮೆಟಾ, ಎಕ್ಸ್‌ ಸೇರಿದಂತೆ ಸಾಮಾಜಿಕ ಮಾಧ್ಯಮ ಮತ್ತು ಇತರರ ವಿರುದ್ಧ ಸಿವಿಲ್ ಮೊಕದ್ದಮೆ ಹೂಡಲು ಬಾಂಬೆ ಹೈಕೋರ್ಟ್ ಸೋಮವಾರ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಅನುಮತಿ ನೀಡಿದೆ. 


ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಹಾಗೂ ದೂರಸಂಪರ್ಕ ಇಲಾಖೆಯನ್ನು ಸಹ ಈ ಪ್ರಕರಣದಲ್ಲಿ ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.

ಪೋಸ್ಟ್‌ಗಳು, ಡೀಪ್‌ಫೇಕ್ ಚಿತ್ರಗಳು ಮತ್ತು ವಿಡಿಯೊಗಳನ್ನು ಬಳಸಿಕೊಂಡು ಇ20 ಪೆಟ್ರೋಲ್‌ ಉಪಕ್ರಮದಿಂದ ನಾನು ಮತ್ತು ನನ್ನ ಕುಟುಂಬ ಲಾಭ ಪಡೆದುಕೊಳ್ಳುತ್ತಿವೆ ಎಂಬ ಸುಳ್ಳು ಮಾಹಿತಿ ಹರಡಲಾಗುತ್ತಿದೆ ಎಂದು ನ್ಯಾಯಾಲಯಕ್ಕೆ ಸಲ್ಲಿಸಿದ ಅರ್ಜಿಯಲ್ಲಿ ಗಡ್ಕರಿ ದೂರಿದ್ದಾರೆ.

ಈ ಅಭಿಯಾನವು ಸುಳ್ಳು, ದುರುದ್ದೇಶಪೂರಿತ ಮತ್ತು ಮಾನಹಾನಿಕರವಾಗಿದ್ದು, ಸಾರ್ವಜನಿಕರನ್ನು ದಾರಿತಪ್ಪಿಸುವ ಮತ್ತು ತಮ್ಮ ವರ್ಚಸ್ಸಿಗೆ ಧಕ್ಕೆ ತರುವ ಉದ್ದೇಶವನ್ನು ಹೊಂದಿದೆ ಎಂದು ಗಡ್ಕರಿ ವಾದಿಸಿದ್ದಾರೆ.

ತಮ್ಮ ಅರ್ಜಿಯಲ್ಲಿ, ಇ20 ಉಪಕ್ರಮ ಸೇರಿದಂತೆ ಎಥೆನಾಲ್ ಮಿಶ್ರಿತ ಪೆಟ್ರೋಲ್ (ಇಬಿಪಿ) ಕಾರ್ಯಕ್ರಮವು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ವ್ಯಾಪ್ತಿಗೆ ಬರುತ್ತದೆಯೇ ಹೊರತು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಅಡಿಯಲ್ಲಿ ಬರುವುದಿಲ್ಲ ಎಂದು ಗಡ್ಕರಿ ಒತ್ತಿ ಹೇಳಿದ್ದಾರೆ.

ವಾದ ಆಲಿಸಿದ ನ್ಯಾಯಮೂರ್ತಿ ಅಭಯ್ ಅಹುಜಾ ಅವರು, ಆನ್‌ಲೈನ್ ವೇದಿಕೆಗಳ ವಿರುದ್ಧ ಸಿವಿಲ್ ಮೊಕದ್ದಮೆ ಹೂಡಲು ಗಡ್ಕರಿ ಅವರಿಗೆ ಅನುಮತಿ ನೀಡಿದರು. 








ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries