HEALTH TIPS

2027ರ ವೇಳೆಗೆ ಭಾರತ- ಜಪಾನ್ ರಾಜತಾಂತ್ರಿಕ ಬಾಂಧವ್ಯಕ್ಕೆ 75ರ ಸಂಭ್ರಮ: MEA

 ನವದೆಹಲಿ: ದೆಹಲಿಯಲ್ಲಿ ಜಪಾನ್ ಪ್ರಧಾನಿ ಸನೇ ತಕೈಚಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಸಮ್ಮುಖದಲ್ಲಿ '16ನೇ ಭಾರತ-ಜಪಾನ್‌ ವಾರ್ಷಿಕ ಶೃಂಗಸಭೆ'ಯು ಯಶಸ್ವಿಯಾಗಿ ನಡೆಯಿತು ಎಂದು ಸಚಿವಾಲಯ ತಿಳಿಸಿದೆ. 


ಭಾರತ ಮತ್ತು ಜಪಾನ್ ಸ್ನೇಹವನ್ನು ಇನ್ನಷ್ಟು ಬಲಪಡಿಸಲು ಎರಡೂ ದೇಶಗಳು ಬದ್ಧವಾಗಿವೆ.

ಇಂಡೋ-ಪೆಸಿಫಿಕ್ ಹಾಗೂ ಶಾಂತಿ, ಸಮೃದ್ಧಿ ಮತ್ತು ಸ್ಥಿರತೆಯನ್ನು ಗಟ್ಟಿಯಾಗಿಸಲು ಜೊತೆಯಾಗಿ ಕಾರ್ಯನಿರ್ವಹಿಸಲಿವೆ ಎಂದು ಸಚಿವಾಲಯ ತಿಳಿಸಿದೆ.

ಈ ಸಭೆಯಲ್ಲಿ, 'ಜಪಾನ್ ಪ್ರಧಾನಿ ಸನೇ ತಕೈಚಿ ಅವರ ಭಾರತ ಭೇಟಿ ಸಂದರ್ಭದಲ್ಲಿ ಉಭಯ ದೇಶಗಳು ರಕ್ಷಣೆ, ಮೂಲಸೌಕರ್ಯ ಮತ್ತು ಕಡಲ ಸಹಕಾರವನ್ನು ವಿಸ್ತರಿಸಲು ಪ್ರಮುಖ ಒಪ್ಪಂದಗಳಿಗೆ ಎರಡು ದೇಶಗಳು ಸಹಿ ಮಾಡಲಾಗಿದೆ ಎಂದು ಸಚಿವಾಲಯ ತಿಳಿಸಿದೆ.

'ನೆನಪಿನಲ್ಲಿ ಉಳಿಯುವ ಪ್ರವಾಸ ಮುಕ್ತಾಯಗೊಂಡಿದೆ. ಇದು ಭಾರತ ಮತ್ತು ಜಪಾನ್ ಸ್ನೇಹವನ್ನು ಇನ್ನಷ್ಟು ಗಟ್ಟಿಗೊಳಿಸುತ್ತದೆ. ಸನೇ ತಕೈಚಿ ಅವರು ಭಾರತದಿಂದ ಹೊರಟಿದ್ದಾರೆ. ಅವರನ್ನು ಪ್ರೀತಿಯಿಂದ ಬೀಳ್ಕೊಡುಗೆ ಮಾಡಲಾಯಿತು. 2027ರ ಹೊತ್ತಿಗೆ ಭಾರತ- ಜಪಾನ್ ನಡುವಿನ ರಾಜತಾಂತ್ರಿಕ ಸಂಬಂಧಕ್ಕೆ 75 ತುಂಬಲಿದೆ. ಇದು ಒಂದು ಸಂಭ್ರಮವಾಗಿ ಆಚರಿಸಲಾಗುವುದು ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.









ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries