ಕುಂಬಳೆ: ಮದ್ಯ ವ್ಯಸನದಿಂದ ಅದೆಷ್ಟೋ ಕುಟುಂಬಗಳು ಬೀದಿಪಾಲಾಗುತ್ತಿರುವ ಮಧ್ಯೆ, ಶ್ರೀಧರ್ಮಸ್ಥಳ ಕ್ಷೇತ್ರದ ವತಿಯಿಂದ ವ್ಯಸನಮುಕ್ತ ಸಮಾಜದ ಧ್ಯೇಯದೊಂದಿಗೆ ನಡೆಯುತ್ತಿರುವ ಮದ್ಯವರ್ಜನ ಶಿಬಿರ ದೇಶಕ್ಕೆ ಮಾದರಿಯಾಗಿರುವುದಾಗಿ ಬ್ರಹ್ಮಶ್ರೀ ಚಕ್ರಪಾಣಿ ದೇವಪೂಜಿತ್ತಾಯ ತಿಳಿಸಿದ್ದಾರೆ.
ಅವರು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪರಮಪೂಜ್ಯ ರಾಜರ್ಷಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಕಳತ್ತೂರಿನ ಶ್ರೀ ಮಹಾದೇವ ಭಜನಾ ಮಂದಿರದಲ್ಲಿ ನಡೆಯುತ್ತಿರುವ 2080ನೇ ಮದ್ಯವರ್ಜನ ಶಿಬಿರ ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಮಂಜೇಶ್ವರ ತಾಲೂಕು ಅಧ್ಯಕ್ಷ ಮಂಜುನಾಥ ಆಳ್ವ ಮಡ್ವ ಅಧ್ಯಕ್ಷತೆ ವಹಿಸಿದ್ದರು. ಕುಂಬಳೆ ಗ್ರಾಮ ಪಂಚಾಯಿತಿ ಅಧ್ಯಕ್ಷ ವಿ.ಪಿ. ಅಬ್ದುಲ್ ಖಾದರ್, ಕಾಸರಗೋಡು ಜಿಪಂ ಸದಸ್ಯ ಅಜೀಜ್ ಕಳತ್ತೂರು, ಕುಂಬಳೆ ಗ್ರಾಪಂ ಸದಸ್ಯ ಸುಕೇಶ್ ಭಂಡಾರಿ, ಪುತ್ತಿಗೆ ಗ್ರಾಪಂಸದಸ್ಯ ಬಾಲಕೃಷ್ಣ ರೈ, ಮಧ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಜಯಪ್ರಸಾದ್ ರೈ ಕಾರಿಂಜ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.) ದಕ್ಷಿಣ ಕನ್ನಡ-2 ಜಿಲ್ಲೆ ನಿರ್ದೇಶಕ ಬಾಬು ನಾಯ್ಕ, ಧಾರ್ಮಿಕ ಮುಖಂಡ ಯೋಗಿಶ್ ಕಡಮಣ್ಣಾಯ, ಮಧ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿಯ ಗೌರವಾಧ್ಯಕ್ಷ ಸುರೇಶ್ ಕುಮಾರ್ ಶೆಟ್ಟಿ ಪೂಕಟ್ಟೆ, ಕ್ಷೀರೋತ್ಪಾದನ ಸಹಕಾರಿ ಸಂಘದ ಅಧ್ಯಕ್ಷ ಶಿವರಾಮ್ ಭಟ್ ಕಾರಿಂಜ, ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಮಂಜೇಶ್ವರ ತಾಲೂಕು ಅಧ್ಯಕ್ಷ ಉದಯಕುಮಾರ್ ಆನೆಬಾಗಿಲು, ಕುಂಬಳೆ ಗ್ರಾಮ ಪಂಚಾಯತ್ ಸದಸ್ಯೆ ಅಮಿತಾ ದೇವದಾಸ್ ಆಳ್ವ, ಶಿಬಿರ ವ್ಯವಸ್ಥಾಪನಾ ಸಮಿತಿ ಕೋಶಾಧಿಕಾರಿ ನರಹರಿ ಮಾಸ್ಟರ್ ಹಾಗೂ ಶ್ರೀನಿವಾಸ ಆಳ್ವ ಕಳತ್ತೂರು ಉಪಸ್ಥಿತರಿದ್ದರು.
ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ (ರಿ.) ವಲಯಾಧ್ಯಕ್ಷ ಮಹೇಶ್ ಪುಣಿಯೂರು ಹಾಗೂ ಶ್ರೀ ಮಹಾದೇವ ಸಭಾಭವನ ಕಳತ್ತೂರು ಅಧ್ಯಕ್ಷ ಬಾಲಕೃಷ್ಣ ನೆಲ್ಯಡ್ಕ ಗೌರವ ಉಪಸ್ಥಿತರಿದ್ದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪ್ರಾದೇಶಿಕ ಯೋಜನಾಧಿಕಾರಿ ಗಣೇಶ್ ಆಚಾರ್ಯ ಪ್ರಾಸ್ತಾವಿಕವಾಗಿ ಮಾತುಗಳನ್ನಾಡಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಮಂಜೇಶ್ವರ ಯೋಜನಾಧಿಕಾರಿ ಶಶಿಕಲಾ ಸುವರ್ಣ ಸ್ವಾಗತಿಸಿದರು. ಕುಂಬಳೆ ವಲಯದ ಮೇಲ್ವಿಚಾರಕ ಅಭಿಷೇಕ್ ಡಿ. ವಂದಿಸಿದರು.



