HEALTH TIPS

ರಾಮಮಂದಿರ ದೇಣಿಗೆ ದುರುಪಯೋಗ ಪ್ರಕರಣ : ಸುಪ್ರೀಂ ಕೋರ್ಟ್‌ನಲ್ಲಿ ಜುಲೈ 20ರಂದು ಅರ್ಜಿಗಳ ವಿಚಾರಣೆ

 ನವದೆಹಲಿ: ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ಬಗ್ಗೆ ನ್ಯಾಯಸಮ್ಮತ ಮತ್ತು ಸಮಯ ಮಿತಿಯೊಳಗೆ ತನಿಖೆ ನಡೆಸುವಂತೆ ಕೋರಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಜುಲೈ 20ರಂದು ನಡೆಸಲಿದೆ.


ಸುಪ್ರೀಂ ಕೋರ್ಟ್‌ನ ಜುಲೈ 20ರ ಪ್ರಕರಣಗಳ ಪಟ್ಟಿ ಪ್ರಕಾರ, ಈ ವಿಷಯಕ್ಕೆ ಸಂಬಂಧಿಸಿದ ನಾಲ್ಕು ಪ್ರತ್ಯೇಕ ಅರ್ಜಿಗಳು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿಗಳಾದ ಜಾಯ್‌ಮಾಲ್ಯ ಬಾಗ್ಚಿ ಹಾಗೂ ವಿ. ಮೋಹನಾ ಅವರನ್ನೊಳಗೊಂಡ ಪೀಠದ ಮುಂದೆ ವಿಚಾರಣೆಗ ಬರಲಿವೆ.

ಈ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ಜುಲೈ 13ರಂದು ಒಪ್ಪಿಗೆ ಸೂಚಿಸಿತ್ತು. ಅಲ್ಲದೆ, ಈ ವಿಷಯದ ತನಿಖೆಗಾಗಿ ಉತ್ತರಪ್ರದೇಶ ಸರಕಾರ ರಚಿಸಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)ಕ್ಕೆ ಸ್ಥಿತಿಗತಿ ವರದಿಯನ್ನು ಸಲ್ಲಿಸುವಂತೆ ನಿರ್ದೇಶಿಸಿತ್ತು.

ಈ ವಿಷಯದಲ್ಲಿ ಪ್ರತಿಕ್ರಿಯೆ ಕೋರಿ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ಗೆ ಕೂಡ ನೋಟಿಸ್ ಜಾರಿ ಮಾಡಿತ್ತು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries