HEALTH TIPS

ಭಾರತೀಯ ವಿಮಾನಗಳಿಗೆ ವಾಯುಪ್ರದೇಶ ನಿರ್ಬಂಧ ಆಗಸ್ಟ್ 24 ರವರೆಗೆ ವಿಸ್ತರಿಸಿದ ಪಾಕಿಸ್ತಾನ

 ಇಸ್ಲಾಮಾಬಾದ್: ಭಾರತೀಯ ವಿಮಾನಗಳಿಗೆ ತನ್ನ ವಾಯುಪ್ರದೇಶದ ಮೇಲಿನ ನಿರ್ಬಂಧವನ್ನು ಶನಿವಾರ ಪಾಕಿಸ್ತಾನ ಆಗಸ್ಟ್ 24 ರವರೆಗೆ ವಿಸ್ತರಿಸಿದೆ ಎಂದು ಪಾಕ್ ವಿಮಾನ ನಿಲ್ದಾಣ ಪ್ರಾಧಿಕಾರ ತಿಳಿಸಿದೆ.


ಪಾಕಿಸ್ತಾನ ವಿಮಾನ ನಿಲ್ದಾಣ ಪ್ರಾಧಿಕಾರ(ಪಿಎಎ) ಹೊರಡಿಸಿದ ನೋಟಿಸ್ ಟು ಏರ್‌ಮೆನ್(ನೋಟಾಮ್) ಪ್ರಕಾರ, ಈ ನಿಷೇಧವು ಭಾರತೀಯ-ನೋಂದಾಯಿತ, ನಿರ್ವಹಿಸುವ, ಒಡೆತನದ ಮತ್ತು ಗುತ್ತಿಗೆ ಪಡೆದ ಎಲ್ಲಾ ವಿಮಾನಗಳಿಗೆ ಅನ್ವಯಿಸುತ್ತದೆ.

ಭಾರತೀಯ ಮಿಲಿಟರಿ ಮತ್ತು ನಾಗರಿಕ ವಿಮಾನಗಳು ಪಾಕಿಸ್ತಾನದ ವಾಯುಪ್ರದೇಶ ಬಳಸುವುದರ ಮೇಲಿನ ನಿರ್ಬಂಧವನ್ನು ಆಗಸ್ಟ್ 24ರ ವರೆಗೆ ವಿಸ್ತರಿಸಲಾಗಿದೆ ಎಂದು ಪಾಕಿಸ್ತಾನ ತಿಳಿಸಿದೆ.

ಕಳೆದ ವರ್ಷ 26 ಜನರನ್ನು ಬಲಿತೆಗೆದುಕೊಂಡ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಎರಡೂ ದೇಶಗಳ ನಡುವಿನ ಉದ್ವಿಗ್ನತೆಯ ಹಿನ್ನೆಲೆಯಲ್ಲಿ ಏಪ್ರಿಲ್ 23 ರಂದು ಭಾರತೀಯ ವಿಮಾನಗಳಿಗೆ ತನ್ನ ವಾಯುಪ್ರದೇಶವನ್ನು ಪಾಕಿಸ್ತಾನ ನಿರ್ಬಂಧಿಸಿತ್ತು.

ವಾಯುಪ್ರದೇಶ ನಿರ್ಬಂಧವನ್ನು ವಿಸ್ತರಿಸಿದ್ದಕ್ಕಾಗಿ ಭಾರತ ಮತ್ತು ಪಾಕಿಸ್ತಾನ ಎರಡೂ ದೇಶಗಳು ವಾಯುಪಡೆಯವರಿಗೆ(NOTAMs) ಪ್ರತ್ಯೇಕ ನೋಟಿಸ್‌ಗಳನ್ನು ನೀಡಿವೆ. 


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries