ಪಾಲ್ಗಾರ್: ಮಹಾರಾಷ್ಟ್ರದಲ್ಲಿ ಎರಡು ದಿನಗಳಿಂದ ಭಾರಿ ಮಳೆಯಾಗಿದೆ. ಇದರ ಪರಿಣಾಮ ಪಾಲ್ಗಾರ್ ಹಲವೆಡೆ ಪ್ರವಾಹ ಉಂಟಾಗಿದೆ. ಈ ಘಟನೆಯಲ್ಲಿ ಇಬ್ಬರು ಪ್ರಾಣ ಕಳೆದುಕೊಂಡಿದ್ದು, ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಿಲುಕಿದ್ದ 244 ಜನರನ್ನುರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಫ್) ರಕ್ಷಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪಾಲ್ಗಾರ್ ಪ್ರವಾಹ ಉಂಟಾಗಿರುವುದರಿಂದ ಶುಕ್ರವಾರದಿಂದ ಮುಂದಿನ ಆದೇಶದವರೆಗೂ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಗುರುವಾರ ಬೆಳಗ್ಗೆಯಿಂದ ಶುಕ್ರವಾರ ಬೆಳಗ್ಗೆ 5 ಗಂಟೆಯವರೆಗೆ ಎನ್‌ಡಿಆರ್‌ಫ್ ಪಡೆಯು ಪ್ರವಾಹದಲ್ಲಿ ಸಿಲುಕಿದ್ದವರನ್ನು ರಕ್ಷಿಸಿದೆ. ಈ ಪ್ರವಾಹದಲ್ಲಿ ನೂರಾರು ಮನೆಗಳು, ಅಂಗಡಿ ಮುಂಗಟ್ಟುಗಳು ಕೊಚ್ಚಿ ಹೋಗಿವೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಕೋಶದ ಮುಖ್ಯಸ್ಥ ವಿವೇಕಾನಂದ್ ಕದಮ್ ಮಾಹಿತಿ ಹಂಚಿಕೊಂಡಿದ್ದಾರೆ.
ಈ ಘಟನೆಯಲ್ಲಿ ಪಾಲ್ಘರ್ ನಗರದ 124 ಜನರನ್ನು, ಕಾರ್ಖಾನೆಯಲ್ಲಿ ಸಿಲುಕಿದ್ದ 65 ಕಾರ್ಮಿಕರನ್ನು, ಹಳ್ಳಿಗಳಲ್ಲಿ ಸಿಲುಕಿದ್ದ 25 ಜನರನ್ನು ಎನ್‌ಡಿಆರ್‌ಫ್ ಪಡೆಯು ರಕ್ಷಿಸಿದೆ ಎಂದು ಅಧಿಕಾರಿಗಳು ಮಾಹಿತಿ ಹಂಚಿಕೊಂಡಿದ್ದಾರೆ.

