ಉಪ್ಪಳ: ಕೊಂಡೆವೂರು ಶ್ರೀ ನಿತ್ಯಾನಂದ ಯೋಗಾಶ್ರಮ ಮಠದಲ್ಲಿ ಜು. 26 ರಂದು ನಡೆಯಲಿರುವ ಕಾರ್ಗಿಲ್ ವಿಜಯ ದಿವಸ್ ಕಾರ್ಯಕ್ರಮದಲ್ಲಿ ಸುಬೇದಾರ್ ಮೇಜರ್ ಕ್ಯಾಪ್ಟನ್ ಯೋಗೇಂದ್ರ ಸಿಂಗ್ ಯಾದವ್ (ಪರಮ ವೀರಚಕ್ರ) ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಕಾರ್ಗಿಲ್ ಯುದ್ಧದ ಸಂದರ್ಭ ಅವರ ಶೌರ್ಯಕ್ಕೆ ಭಾರತದ ಅತ್ಯುನ್ನತ ಮಿಲಿಟರಿ ಪ್ರಶಸ್ತಿಯಾದ ಪರಮ ವೀರಚಕ್ರ ನೀಡಿ ಭಾರತ ಸರ್ಕಾರ ಗೌರವಿಸಿತ್ತು.

.jpg)
