ತಿರುವನಂತಪುರಂ: ಪಾಲಕ್ಕಾಡ್ ಜಿಲ್ಲೆಯಲ್ಲಿ ನಡೆದ ಮಕ್ಕಳ ನಿಗೂಢ ಸಾವಿನ ಕುರಿತು ಡಿಜಿಪಿ ರಾವಡ ಚಂದ್ರಶೇಖರ್ ವರದಿ ಕೋರಿದ್ದಾರೆ. ಕಳೆದ ಎಂಟು ವರ್ಷಗಳಲ್ಲಿ ನಡೆದ 28 ಮಕ್ಕಳ ನಿಗೂಢ ಸಾವಿನ ಕುರಿತು ತಕ್ಷಣ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ರಾಜ್ಯ ಪೋಲೀಸ್ ಮುಖ್ಯಸ್ಥರು ಸೂಚಿಸಿದ್ದಾರೆ.
ತ್ರಿಶೂರ್ ರೇಂಜ್ ಡಿಐಜಿ ಟಿ. ನಾರಾಯಣ್ ಅವರನ್ನು ಒಂದು ವಾರದೊಳಗೆ ವರದಿ ಸಲ್ಲಿಸುವಂತೆ ನಿರ್ದೇಶಿಸಲಾಗಿದೆ. ವಾಳಯಾರ್‍ನಲ್ಲಿ ನಡೆದ ಘಟನೆಗಳು ಸೇರಿದಂತೆ ಕ್ರಿಯಾ ಮಂಡಳಿಯು ಸಚಿವ ರಮೇಶ್ ಚೆನ್ನಿತ್ತಲ ಅವರಿಗೆ ಸಲ್ಲಿಸಿದ ದೂರಿನ ಆಧಾರದ ಮೇಲೆ ಈ ತುರ್ತು ಕ್ರಮ ಕೈಗೊಳ್ಳಲಾಗಿದೆ.
ಗೃಹ ಸಚಿವರು ಸ್ವೀಕರಿಸಿದ ದೂರನ್ನು ಮುಂದಿನ ಕ್ರಮಕ್ಕಾಗಿ ರಾಜ್ಯ ಪೆÇಲೀಸ್ ಮುಖ್ಯಸ್ಥರಿಗೆ ಹಸ್ತಾಂತರಿಸಲಾಗಿದೆ. ನಿಗೂಢ ಸಾವುಗಳ ಜೊತೆಗೆ, ಕಳೆದ ಹತ್ತು ವರ್ಷಗಳಲ್ಲಿ ಜಿಲ್ಲೆಯಲ್ಲಿ ಕಾಣೆಯಾದ ಮಕ್ಕಳ ಬಗ್ಗೆ ವಿವರವಾದ ತನಿಖೆ ನಡೆಸುವ ಪ್ರಸ್ತಾಪವಿದೆ.
ಸನಂಧ ಸಂಘಟನೆಯೊಂದು ಈ ವಿಷಯದ ಬಗ್ಗೆ ಸಮಗ್ರ ತನಿಖೆ ನಡೆಸಬೇಕೆಂದು ಒತ್ತಾಯಿಸಿ ಹೈಕೋರ್ಟ್ ಮೆಟ್ಟಿಲೇರಿತ್ತು. ಪ್ರಕರಣದ ಗಂಭೀರತೆಯನ್ನು ಗಮನಿಸಿದರೆ, ಮುಂದಿನ ದಿನಗಳಲ್ಲಿ ಈ ಉದ್ದೇಶಕ್ಕಾಗಿ ವಿಶೇಷ ತನಿಖಾ ತಂಡವನ್ನು ನೇಮಿಸುವ ಸೂಚನೆಗಳೂ ಇವೆ.

