HEALTH TIPS

ಶಬರಿಮಲೆ ಚಿನ್ನ ಕಳವು ಪ್ರಕರಣ: 30 ದಿನಗಳಲ್ಲಿ ಮೊದಲ ಪ್ರಕರಣದ ಅಂತಿಮ ವರದಿ ಸಲ್ಲಿಕೆ; ಕೇರಳ ಹೈಕೋರ್ಟ್‌ ಗೆ SIT ಮಾಹಿತಿ

ಕೊಚ್ಚಿ: ಶಬರಿಮಲೆ ಚಿನ್ನ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಎರಡು ಪ್ರಕರಣಗಳ ಪೈಕಿ ಮೊದಲ ಪ್ರಕರಣದ ಅಂತಿಮ ವರದಿಯನ್ನು 30 ದಿನಗಳೊಳಗೆ ಸಲ್ಲಿಸುವುದಾಗಿ ವಿಶೇಷ ತನಿಖಾ ತಂಡ (SIT) ಸೋಮವಾರ ಕೇರಳ ಹೈಕೋರ್ಟ್‌ ಗೆ ತಿಳಿಸಿದೆ. 


ಶಬರಿಮಲೆ ದೇವಸ್ಥಾನದ ಶ್ರೀಕೋವಿಲ್‌ನ ದ್ವಾರದ ಎರಡೂ ಬದಿಯಲ್ಲಿ ಅಳವಡಿಸಲಾಗಿದ್ದ ಪ್ರಭಾವಳಿಯಿಂದ ಚಿನ್ನ ಕಳವು ಮಾಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದ ಪ್ರಕರಣ ಇದಾಗಿದೆ.

ಎರಡನೇ ಪ್ರಕರಣದ ತನಿಖೆಯನ್ನೂ ಮತ್ತಷ್ಟು ವಿಳಂಬವಿಲ್ಲದೆ ಪೂರ್ಣಗೊಳಿಸಿ ಅಂತಿಮ ವರದಿ ಸಲ್ಲಿಸಲಾಗುವುದು ಎಂದು SIಖಿ ನ್ಯಾಯಾಲಯಕ್ಕೆ ತಿಳಿಸಿತು. ಆದರೆ, ತನಿಖೆಯ ಕೆಲವು ಗೌಪ್ಯ ಅಂಶಗಳನ್ನು ಪೂರ್ಣಗೊಳಿಸಲು ಹೆಚ್ಚುವರಿ ಕಾಲಾವಕಾಶ ನೀಡುವಂತೆ ಮನವಿ ಮಾಡಿತು.

ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಅಪರಾಧ) ಎಚ್. ವೆಂಕಿಟೇಶ್ ಮಂಡಿಸಿದ ವಾದಗಳನ್ನು ದಾಖಲಿಸಿಕೊಂಡ ನ್ಯಾಯಮೂರ್ತಿಗಳಾದ ರಾಜಾ ವಿಜಯರಾಘವನ್ ಮತ್ತು ಕೆ.ವಿ. ಜಯಕುಮಾರ್ ಅವರನ್ನೊಳಗೊಂಡ ನ್ಯಾಯಪೀಠವು, SIಖಿ ಮುಖ್ಯಸ್ಥ ಶಶಿಧರನ್, ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಕೇರಳ ಪೊಲೀಸ್ ಅಕಾಡೆಮಿಯ ಸಹಾಯಕ ನಿರ್ದೇಶಕರೊಂದಿಗೆ ತನಿಖೆಯ ಪ್ರಗತಿ ಕುರಿತು ಚರ್ಚಿಸಿತು.

ಮೊದಲ ಪ್ರಕರಣದ ತನಿಖೆ ಗಮನಾರ್ಹ ಪ್ರಮಾಣದಲ್ಲಿ ಪೂರ್ಣಗೊಂಡಿದ್ದು, 30 ದಿನಗಳೊಳಗೆ ಅಂತಿಮ ವರದಿ ಸಲ್ಲಿಸಲಾಗುವುದು ಎಂದು SIಖಿ ತಿಳಿಸಿತು. ಸಕ್ಷಮ ಪ್ರಾಧಿಕಾರದಿಂದ ಪ್ರಾಸಿಕ್ಯೂಷನ್‌ಗೆ ಅನುಮತಿ ದೊರೆತ ಬಳಿಕ ಮುಂದಿನ ಕಾನೂನು ಕ್ರಮಗಳನ್ನು ಆರಂಭಿಸಲಾಗುವುದು ಎಂದೂ ನ್ಯಾಯಾಲಯಕ್ಕೆ ಮಾಹಿತಿ ನೀಡಿತು.

ಜಮ್‌ಶೆಡ್‌ಪುರದ ನ್ಯಾಷನಲ್ ಮೆಟಲರ್ಜಿಕಲ್ ಲ್ಯಾಬೊರೇಟರಿಯ ಅSIಖನಲ್ಲಿ ಮಾದರಿಗಳ ವಿಶೇಷ ವೈಜ್ಞಾನಿಕ ಪರೀಕ್ಷೆ ನಡೆಸಲು ಹೆಚ್ಚಿನ ಸಮಯ ಹಿಡಿದಿದ್ದರಿಂದ ತನಿಖೆ ಪೂರ್ಣಗೊಳ್ಳುವಲ್ಲಿ ವಿಳಂಬವಾಗಿದೆ ಎಂಬ ಅಂಶವನ್ನು ನ್ಯಾಯಾಲಯ ದಾಖಲಿಸಿಕೊಂಡಿತು. ಪ್ರಯೋಗಾಲಯದ ವೈಜ್ಞಾನಿಕ ವರದಿ ಜುಲೈ 6ರಂದು SIಖಿಗೆ ಲಭ್ಯವಾಗಿತ್ತು.

ಎರಡನೇ ಪ್ರಕರಣದ ತನಿಖೆಯನ್ನು ಆದಷ್ಟು ಶೀಘ್ರ ಪೂರ್ಣಗೊಳಿಸಿ, ಸಕ್ಷಮ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸುವಂತೆ ನ್ಯಾಯಪೀಠವು SIಖಿಗೆ ನಿರ್ದೇಶನ ನೀಡಿತು.

ಪ್ರಕರಣದ ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 3ಕ್ಕೆ ಮುಂದೂಡಲಾಗಿದೆ. 









ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries