ಲಾಹೋರ್/ಪೆಶಾವರ: ಕಳೆದ ಒಂದು ವಾರದಿಂದ ಪಾಕಿಸ್ತಾನದ ಪಂಜಾಬ್ ಮತ್ತು ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಭಾರಿ ಮಳೆ ಸುರಿಯುತ್ತಿದೆ. ಮಳೆ ಸಂಬಂಧಿತ ಅವಘಡಗಳಲ್ಲಿ ಕನಿಷ್ಠ 31 ಜನ ಮೃತಪಟ್ಟಿದ್ದು, 120 ಜನ ಗಾಯಗೊಂಡಿದ್ದಾರೆ.
ಭಾರಿ ಮಳೆಯಿಂದ ಪ್ರವಾಹ ಉಂಟಾಗಿದ್ದು, ಮನೆಗಳ ಕುಸಿತ ಮತ್ತು ವಿದ್ಯುತ್ ಅವಘಡಗಳು ಸಂಭವಿಸಿವೆ.
ಹವಾಮಾನ ಇಲಾಖೆಯು, ಭಾರಿ ಮಳೆ ಮುನ್ಸೂಚನೆ ನೀಡಿದೆ.
ಪಂಜಾಬ್ ಪ್ರಾಂತ್ಯದಲ್ಲಿ ಮಕ್ಕಳು ಸೇರಿದಂತೆ ಕನಿಷ್ಠ 17 ಮಂದಿ ಮೃತಪಟ್ಟಿದ್ದು, 107 ಮಂದಿ ಗಾಯಗೊಂಡಿದ್ದಾರೆ. ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಆರು ಮಕ್ಕಳು ಸೇರಿ 14 ಜನ ಮೃತಪಟ್ಟಿದ್ದು, 19 ಜನ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

