HEALTH TIPS

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಪ್ರಕರಣ: ಆರೋಪಿಗೆ 40 ವರ್ಷ ಕಠಿಣ ಸಜೆ, ಜುಲ್ಮಾನೆ

ಕಾಸರಗೋಡು: ಅಪ್ರಾಪ್ತೆ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪೋಕ್ಸೋ ಪ್ರಕರಣದ ಆರೋಪಿಗೆ ನ್ಯಾಯಾಲಯ ವಿವಿಧ ಸೆಕ್ಷನ್‍ಗಳಲ್ಲಾಗಿ ಒಟ್ಟು 40 ವರ್ಷ ಕಠಿಣ ಸಜೆ ಹಾಗೂ 60,000 ರೂ. ಜುಲ್ಮಾನೆ ವಿಧಿಸಿ ತೀರ್ಪು ನೀಡಿದೆ. 


ಹೊಸದುರ್ಗ ಮಾಲೋಂ ಅದಿರುಮಾವು ಪಾಪ್ಪಿನಿ ವೀಟಿಲ್‍ನ ಪಿ.ಡಿ.ಸನೀಶ್ (33) ಎಂಬಾತನಿಗೆ ಹೊಸದುರ್ಗ ಫಾಸ್ಟ್ ಟ್ರಾಕ್ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಪಿ.ಎಂ. ಸುರೇಶ್ ಈ ಶಿಕ್ಷೆ ವಿಧಿಸಿದ್ದಾರೆ. ಜುಲ್ಮಾನೆ ಪಾವತಿಸದಿದ್ದಲ್ಲಿ ಆರೋಪಿ ಒಂದು ವರ್ಷ ಹೆಚ್ಚುವರಿ ಸಜೆ ಅನಭವಿಸಬೇಕಾಗಿದೆಯೆಂದೂ ತೀರ್ಪಿನಲ್ಲಿ ತಿಳಿಸಲಾಗಿದೆ.

ಚಿತ್ತಾರಿಕ್ಕಲ್ ಪೋಲೀಸ್ ಠಾಣೆ ವ್ಯಾಪ್ತಿಗೊಳಪಟ್ಟ ಪ್ರದೇಶದ ಏಳರ ಹರೆಯದ ಅಪ್ರಾಪ್ತ ಬಾಲಕಿಗೆ 2023 ರಿಂದ ವಿವಿಧ ದಿನಗಳಲ್ಲಾಗಿ ಲೈಂಗಿಕ ಕಿರುಕುಳ ನೀಡಿದ ದೂರಿನಂತೆ  ಚಿತ್ತಾರಿಕಲ್ ಪೋಲೀಸರು ಆರೋಪಿ ವಿರುದ್ದ  ಪೋಕ್ಸೋ ಕಾನೂನುಪ್ರಕಾರ ಪ್ರಕರಣ ದಾಖಲಿಸಿಕೊಂಡಿದ್ದರು. ಅಂದು ಚಿತ್ತಾರಿಕ್ಕಲ್   ಠಾಣೆ  ಇನ್‍ಸ್ಪೆಕ್ಟರ್ ಆಗಿದ್ದ ರಂಜಿತ್ ರವೀಂದ್ರನ್ ಈ ಪ್ರಕರಣದ ತನಿಖೆ ನಡೆಸಿ ನ್ಯಾಯಾಲಯದಲ್ಲಿ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಪ್ರೋಸಿಕ್ಯೂಶನ್ ಪರ ಹೊಸದುರ್ಗ ಸ್ಪೆಷಲ್ ಪಬ್ಲಿಕ್ ಪ್ರೋಸಿಕ್ಯೂಟರ್ ಎಂ. ಗಂಗಾಧರನ್ ನ್ಯಾಯಾಲಯದಲ್ಲಿ ವಾದಿಸಿದ್ದರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries