ಮಂಜೇಶ್ವರ: ಮಂಜೇಶ್ವರ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವಾರ್ಷಿಕ ಮಹಾಸಭೆ ಹೊಸಂಗಡಿ ಶ್ರೀ ಅಯ್ಯಪ್ಪ ಕ್ಷೇತ್ರದಲ್ಲಿ ನಡೆಯಿತು. ಸಮಿತಿಯ ಅಧ್ಯಕ್ಷ ಪದ್ಮನಾಭ ಕಡಪ್ಪರ ಅಧ್ಯಕ್ಷತೆ ವಹಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದ್ದರು. ಸಮಿತಿಯ ಪ್ರಧಾನ ಕಾರ್ಯದರ್ಶಿ ಅವಿನಾಶ್ ಹೆಗಡೆ ಸ್ವಾಗತಿಸಿ, ವಾರ್ಷಿಕ ವರದಿ ವಾಚಿಸಿ, ಲೆಕ್ಕಪತ್ರವನ್ನು ಮಂಡಿಸಿದರು.
ಬಳಿಕ 46 ನೇ ವರ್ಷದ ಮಂಜೇಶ್ವರ ಶ್ರೀ ಗಣೇಶೋತ್ಸವದ ನೂತನ ಸಮಿತಿಯ ಪದಾಧಿಕಾರಿಗಳ ಪದಗ್ರಹಣ ನಡೆಯಿತು. ಗೌರವಾಧ್ಯಕ್ಷರಾಗಿ ಹೈಮೇಶ್ ಬಿ.ಎಂ ಕಟ್ಟೆಬಜಾರ್, ಶೇಷಪ್ಪ ಸಾಲಿಯಾನ್ ವಾಮಂಜೂರು ಚೆಕ್ ಪೋಸ್ಟ್, ಅಧ್ಯಕ್ಷರಾಗಿ ಯಾದವ ಬಡಾಜೆ, ಪ್ರಧಾನ ಕಾರ್ಯದರ್ಶಿಯಾಗಿ ಕಮಲಾಕ್ಷ ತೂಮಿನಾಡು, ಕೋಶಾಧಿಕಾರಿಯಾಗಿ ಅಶೋಕ್ ದೇವಾಡಿಗ ಕುಚ್ಚಿಕಾಡ್, ಪ್ರಧಾನ ಸಂಚಾಲಕರಾಗಿ ಪದ್ಮನಾಭ ಕಡಪ್ಪರ, ನವೀನ್ ರಾಜ್ ಕೆ.ಜೆ, ಸಂಘಟನಾ ಕಾರ್ಯದರ್ಶಿಯಾಗಿ ಹರೀಶ್ ಶೆಟ್ಟಿ ಮಾಡ, ಅವಿನಾಶ್ ಹೆಗ್ಡೆ, ಲೆಕ್ಕ ಪರಿಶೋಧಕರಾಗಿ ರಮೇಶ್ ಕಟ್ಟೆಬಜಾರ್ ಆಯ್ಕೆಯಾದರು. ಕಾರ್ಯಕ್ರಮದ ಯಶಸ್ವಿಗಾಗಿ ಇತರ ಸಮಿತಿಗಳನ್ನು ರಚಿಸಲಾಯಿತು. ಸಭೆಯಲ್ಲಿ ಈ ಬಾರಿಯ 46 ನೇ ವರ್ಷದ ಸಾರ್ವಜನಿಕ ಮಂಜೇಶ್ವರ ಶ್ರೀ ಗಣೇಶೋತ್ಸವವು ಸೆ. 14 ರಿಂದ 17 ರವರೆಗೆ ವಿವಿಧ, ವೈದಿಕ, ಧಾರ್ಮಿಕ, ಸಾಂಸ್ಕøತಿಕ ಕಾರ್ಯಕ್ರಮಗಳೊಂದಿಗೆ ನಡೆಸಲು ತೀರ್ಮಾನಿಸಲಾಯಿತು. ಬಳಿಕ ನೂತನ ಸಮಿತಿಯ ಅಧಿಕಾರ ಹಸ್ತಾಂತರ ನಡೆಯಿತು. ಸಂಘಟನಾ ಕಾರ್ಯದರ್ಶಿ ಹರೀಶ್ ಶೆಟ್ಟಿ ಮಾಡ ವಂದಿಸಿದರು. 46 ನೇ ಮಂಜೇಶ್ವರ ಶ್ರೀ ಗಣೇಶೋತ್ಸವದಲ್ಲಿ ಪೂಸಿಯಲ್ಪಡುವ ಗಣಪತಿಯ ವಿಗ್ರಹ ರಚನೆಯ ಮುಹೂರ್ತ ಇಂದು (ಬುಧವಾರ) 8ಕ್ಕೆ ಹೊಸಂಗಡಿ ಶ್ರೀ ಅಯ್ಯಪ್ಪ ಕ್ಷೇತ್ರದಲ್ಲಿ ನಡೆಯಲಿದೆ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

-side.jpg)
-side.jpg)
