HEALTH TIPS

ನೀಟ್‌ ಪ್ರತಿಭಟನೆ: ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯ 47 ಸಿಬ್ಬಂದಿ ವಜಾ

ನವದೆಹಲಿ: ನೀಟ್‌ ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪರೀಕ್ಷಾ ನಿರ್ವಹಣಾ ಸಂಸ್ಥೆಯಾದ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯ (ಎನ್‌ಟಿಎ) 47 ಸಿಬ್ಬಂದಿಯನ್ನು ಕೇಂದ್ರ ಸರ್ಕಾರ ವಜಾ ಮಾಡಿದೆ.

ಈ ಬಗ್ಗೆ ಎಎನ್‌ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಮುಂದಿನ ಒಂದು ತಿಂಗಳೊಳಗೆ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯಲ್ಲಿ ರಚನಾತ್ಮಕ ಬದಲಾವಣೆ ತಂದು ಸಾಂಸ್ಥಿಕ ಸುಧಾರಣೆ ಮಾಡಲಾಗುವುದು ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ವಜಾಗೊಂಡಿರುವ ಕೆಲವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಮೂಲಗಳು ತಿಳಿಸಿದ್ದು, ಅವರ ಹುದ್ದೆ ಅಥವಾ ಕಾನೂನು ಕ್ರಮದ ಕುರಿತು ಹೆಚ್ಚಿನ ವಿವರಗಳನ್ನು ಸರ್ಕಾರ ಬಹಿರಂಗಪಡಿಸಿಲ್ಲ.

ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ಶೀಘ್ರ ವಿಚಾರಣೆಗೆ ತ್ವರಿತ ನ್ಯಾಯಾಲಯಗಳ ಸ್ಥಾಪನೆ ಸೇರಿದಂತೆ ಹಲವು ಪ್ರಮುಖ ಕ್ರಮಗಳನ್ನು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ ಬೆನ್ನಲ್ಲೇ ಈ ನಿರ್ಧಾರ ಹೊರಬಿದ್ದಿದೆ.

ಯಾವುದೇ ಹಂತದಲ್ಲೂ ಸೋರಿಕೆಯಾಗದಂತೆ ಸಂಪೂರ್ಣ ಸುರಕ್ಷಿತ ವ್ಯವಸ್ಥೆ ರೂಪಿಸಲು, ಎನ್‌ಟಿಎ ಪರೀಕ್ಷೆಗಳಲ್ಲಿ ಬಳಸಲಾಗುವ ಹೊರಗುತ್ತಿಗೆ ಪದ್ಧತಿಯಲ್ಲಿ ಪ್ರಮುಖ ಬದಲಾವಣೆಗಳನ್ನು ತರಲಾಗುವುದು ಎಂದು ಸರ್ಕಾರದ ಮೂಲಗಳು ತಿಳಿಸಿವೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries