HEALTH TIPS

50,000 ಕೋಟಿ ರೂ. ವೆಚ್ಚದ ರಕ್ಷಣಾ ಖರೀದಿಗೆ DAC ಅನುಮೋದನೆ

ನವದೆಹಲಿ: ರಕ್ಷಣಾ ಸಚಿವಾಲಯವು ಶುಕ್ರವಾರ 52,000 ಕೋಟಿ ರೂಪಾಯಿಗಿಂತಲೂ ಅಧಿಕ ವೆಚ್ಚದ ಹಲವು ಪ್ರಮುಖ ಖರೀದಿ ಪ್ರಸ್ತಾಪಗಳಿಗೆ ಅನುಮೋದನೆ ನೀಡಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಧ್ಯಕ್ಷತೆಯಲ್ಲಿ ನಡೆದ ರಕ್ಷಣಾ ಖರೀದಿ ಮಂಡಳಿ (DAC) ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಹೊಸದಾಗಿ ನೇಮಕಗೊಂಡಿರುವ ಮೂರೂ ಸೇನಾಪಡೆಗಳ ಮುಖ್ಯಸ್ಥ (ಸಿಡಿಎಸ್) ಜನರಲ್ ರಾಜಾ ಸುಬ್ರಮಣಿ, ಭೂಸೇನಾ ಮುಖ್ಯಸ್ಥ ಜನರಲ್ ಧೀರಜ್ ಸೇಥ್ ಮತ್ತು ನೌಕಾಸೇನಾ ಮುಖ್ಯಸ್ಥ ಅಡ್ಮಿರಲ್ ಕೃಷ್ಣ ಸ್ವಾಮಿನಾಥನ್ ಈ ಸಭೆಯಲ್ಲಿ ಭಾಗವಹಿಸಿದ್ದರು.

ಡ್ರೋನ್ಗಳ ಬೆದರಿಕೆಯನ್ನು ಎದುರಿಸುವ ನಿಟ್ಟಿನಲ್ಲಿ, ಮಾನವರಹಿತ ವೈಮಾನಿಕ ವಾಹನ ನಿಗ್ರಹ ಇಲೆಕ್ಟ್ರಾನಿಕ್ ಯುದ್ಧ ವ್ಯವಸ್ಥೆ 'ಆಕಾಶ್ ತರಂಗ್' ಖರೀದಿಗೆ DAC ಹಸಿರು ನಿಶಾನೆ ತೋರಿದೆ.

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಸ್ವದೇಶದಲ್ಲಿ ಅಭಿವೃದ್ಧಿಪಡಿಸಿರುವ 'ಹೊತ್ತೊಯ್ಯಬಲ್ಲ ಟ್ಯಾಂಕ್-ನಿಗ್ರಹ ನಿರ್ದೇಶಿತ ಕ್ಷಿಪಣಿ (ಎಂಪಿ-ಎಟಿಜಿಎಮ್)' ಖರೀದಿಗೂ ಮಂಡಳಿ ಇದೇ ಸಂದರ್ಭದಲ್ಲಿ ಒಪ್ಪಿಗೆ ನೀಡಿದೆ. ಈ ಮೂರನೇ ತಲೆಮಾರಿನ ಟ್ಯಾಂಕ್-ನಿರೋಧಕ ಕ್ಷಿಪಣಿಯು 4 ಕಿಲೋಮೀಟರ್ ವ್ಯಾಪ್ತಿಯನ್ನು ಹೊಂದಿದ್ದು, 'ಟಾಪ್ ಅಟ್ಯಾಕ್' ಮಾದರಿಯಲ್ಲಿ ದಾಳಿ ಮಾಡುವ ಸಾಮರ್ಥ್ಯ ಹೊಂದಿದೆ. ಅಂದರೆ, ಈ ಕ್ಷಿಪಣಿಯು ಟ್ಯಾಂಕ್ ನ ಕವಚ ಅತ್ಯಂತ ದುರ್ಬಲವಾಗಿರುವ ಮೇಲ್ಭಾಗಕ್ಕೆ ಅಪ್ಪಳಿಸಿ ಧ್ವಂಸಗೊಳಿಸುತ್ತದೆ.

ರಕ್ಷಣಾ ಸಚಿವರ ಅಧ್ಯಕ್ಷತೆಯ ಈ ಮಂಡಳಿಯು ಹೆಚ್ಚುವರಿ 'ಮಧ್ಯಮ ಶ್ರೇಣಿಯ ಮೇಲ್ಮೈಯಿಂದ ಆಕಾಶಕ್ಕೆ ಚಿಮ್ಮುವ ಕ್ಷಿಪಣಿ (MRSAM)' ಖರೀದಿಗೂ ಅನುಮೋದನೆ ನೀಡಿದೆ. ಈ ಕ್ಷಿಪಣಿಯು 70 ಕಿಲೋಮೀಟರ್ ವ್ಯಾಪ್ತಿಯನ್ನು ಹೊಂದಿದ್ದು, ಯುದ್ಧವಿಮಾನಗಳು, ಯುಎವಿಗಳು, ಹೆಲಿಕಾಪ್ಟರ್ಗಳು ಮತ್ತು ಕ್ರೂಸ್ ಕ್ಷಿಪಣಿಗಳಂತಹ ವೈಮಾನಿಕ ಬೆದರಿಕೆಗಳನ್ನು ಹೊಡೆದುರುಳಿಸಬಲ್ಲದು.

ರಕ್ಷಣಾ ಸಚಿವಾಲಯವು 'ಅತ್ಯಂತ ಕಿರು ಶ್ರೇಣಿಯ ವಾಯು ರಕ್ಷಣಾ ವ್ಯವಸ್ಥೆ (V-SHORADS)' ಖರೀದಿಗೂ ಒಪ್ಪಿಗೆ ನೀಡಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries