ನವದೆಹಲಿ: ಜಿಲ್ಲಾ ನ್ಯಾಯಾಧೀಶರ ನಿವೃತ್ತಿ ವಯಸ್ಸನ್ನು 61ಕ್ಕೆ ಏರಿಸಲು ಸಾಧ್ಯವೇ ಎಂಬ ಕುರಿತು ಆಯಾ ಹೈಕೋರ್ಟ್ಗಳೊಂದಿಗೆ ಸಮಾಲೋಚನೆ ನಡೆಸಿ ನಿರ್ಧಾರ ತೆಗೆದುಕೊಳ್ಳಬೇಕು ಎಂದು ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಿಗೆ ಸುಪ್ರೀಂ ಕೋರ್ಟ್ ಹೇಳಿದೆ.
ದೇಶದಾದ್ಯಂತ ಜಿಲ್ಲಾ ನ್ಯಾಯಾಧೀಶದ ನಿವೃತ್ತಿ ವಯಸ್ಸನ್ನು 62ಕ್ಕೆ ಏರಿಸುವ ಮೂಲಕ ಏಕರೂಪತೆ ಕಾಯ್ದುಕೊಳ್ಳಬೇಕು ಎಂಬ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾಯಮೂರ್ತಿಗಳಾದ ಜಾಯ್ಮಾಲ್ಯಾ ಬಾಗ್ಚಿ ಮತ್ತು ವಿ. ಮೋಹನ ಅವರ ಪೀಠವು, ಈ ಮಧ್ಯಂತರ ನಿರ್ದೇಶನ ಹೊರಡಿಸಿದೆ.

