ಗುವಾಹಟಿ : ಅಸ್ಸಾಂನಲ್ಲಿ ಬುಧವಾರ ಮಳೆ ಸಂಬಂಧಿಸಿದ ದುರಂತಗಳಲ್ಲಿ ಏಳು ಮಂದಿ ಮೃತಪಟ್ಟಿದ್ದಾರೆ. ಇದರೊಂದಿಗೆ ಈ ವರ್ಷ ಪ್ರವಾಹದಿಂದಾಗಿ ಮೃತಪಟ್ಟವರ ಸಂಖ್ಯೆ 75ಕ್ಕೆ ಏರಿಕೆಯಾಗಿದೆ.
ಶಿವಸಾಗರ ಜಿಲ್ಲೆಯಲ್ಲಿ ಏಳು ಮಂದಿ ಸಾವಿಗೀಡಾಗಿದ್ದಾರೆ. ಮೃತರ ಕುಟುಂಬಗಳಿಗೆ ನೀಡುವ ಪರಿಹಾರದ ಮೊತ್ತವನ್ನು ತಲಾ ₹9ಲಕ್ಷಕ್ಕೆ ಏರಿಕೆ ಮಾಡಲಾಗಿದೆ.
ಪ್ರವಾಹದಿಂದ 3.32 ಲಕ್ಷ ಮಂದಿ ಸಂಕಷ್ಟಕ್ಕೀಡಾಗಿದ್ದು, ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ಒಟ್ಟು 81 ನೆರವು ಕೇಂದ್ರಗಳನ್ನು ತೆರೆಯಲಾಗಿದೆ. 32,477 ಮಂದಿ ನಿರಾಶ್ರಿತರಿಗೆ ಆಶ್ರಯ ಒದಗಿಸಲಾಗಿದ್ದು, 34 ಪರಿಹಾರ ವಿತರಣಾ ಕೇಂದ್ರಗಳನ್ನೂ ಸ್ಥಾಪಿಸಲಾಗಿದೆ ಎಂದೂ ಮಾಹಿತಿ ನೀಡಿದ್ದಾರೆ.

