HEALTH TIPS

7ನೇ ರಾಜ್ಯ ಹಣಕಾಸು ಆಯೋಗದ ಶಿಫಾರಸುಗಳು ಮತ್ತು ಹಣಕಾಸು ವೆಚ್ಚ ರಚನೆ- ವಿಚಾರ ಸಂಕಿರಣ


ಕಾಸರಗೋಡು
: ಜಿಲ್ಲಾ ಯೋಜನಾ ಕಚೇರಿ ಮತ್ತು ಕಾಸರಗೋಡು ಸರ್ಕಾರಿ ಕಾಲೇಜು ಅರ್ಥಶಾಸ್ತ್ರ ವಿಭಾಗ ಜಂಟಿಯಾಗಿ ಆಯೋಜಿಸಿದ್ದ 7ನೇ ರಾಜ್ಯ ಹಣಕಾಸು ಆಯೋಗದ ಶಿಫಾರಸುಗಳು ಮತ್ತು ಹಣಕಾಸು ವೆಚ್ಚ ರಚನೆ ವಿಷಯದ ಕುರಿತು ಒಂದು ದಿನದ ವಿಚಾರ ಸಂಕಿರಣವನ್ನು ಜಿಲ್ಲಾ ಯೋಜನಾ ಸಮಿತಿ ಸಭಾಂಗಣದಲ್ಲಿ ನಡೆಸಲಾಯಿತು. 7ನೇ ಹಣಕಾಸು ಆಯೋಗದ ಸಲಹೆಗಾರ ಪ್ರೊ. ಕೆ.ಕೆ. ಹರಿಕುರುಪ್ ತರಗತಿಗಳನ್ನು ನಡೆಸಿದರು. ಜಿಲ್ಲಾ ಪಂಚಾಯತಿ ಅಧ್ಯಕ್ಷ ಸಾಬು ಅಬ್ರಹಾಂ ಅಧ್ಯಕ್ಷತೆ ವಹಿಸಿದ್ದರು. ಕಾಸರಗೋಡು ಸರ್ಕಾರಿ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಯು. ಬಾಲಕೃಷ್ಣನ್ ಮಾತನಾಡಿದರು. ಸ್ಥಳೀಯಾಡಳಿತ ಸಂಸ್ಥೆಗಳ ಕಾರ್ಯದರ್ಶಿಗಳು ಮತ್ತು ನೌಕರರು ಮತ್ತು ಕಾಸರಗೋಡು ಸರ್ಕಾರಿ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಸಂಶೋಧನಾ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಜಿಲ್ಲಾ ಯೋಜನಾ ಅಧಿಕಾರಿ ಬಿ.ಎಂ. ಅನಿಲ್‍ಕುಮಾರ್ ಸ್ವಾಗತಿಸಿ, ಸಹಾಯಕ ಯೋಜನಾ ಅಧಿಕಾರಿ ಸಿ.ಎಂ. ಸುಧೀಶ್ ಕುಮಾರ್ ವಂದಿಸಿದರು. 


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries