HEALTH TIPS

ಜೈಶ್-ಎ-ಮೊಹಮ್ಮದ್ ಭಯೋತ್ಪಾದಕ ಸಂಘಟನೆಯ 8 ಸದಸ್ಯರ ಬಂಧಿಸಿದ ಗುಜರಾತ್ ಎಟಿಎಸ್

 ಅಹಮದಾಬಾದ್: ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ (ಜೆಇಎಂ) ನೊಂದಿಗೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ಎಂಟು ಜನರನ್ನು ಗುಜರಾತ್ ಭಯೋತ್ಪಾದನಾ ನಿರೋಧಕ ದಳ (ಎಟಿಎಸ್) ಬಂಧಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.


ರಾಜ್ಯದ ವಿವಿಧ ಜಿಲ್ಲೆಗಳು ಹಾಗೂ ಮಧ್ಯಪ್ರದೇಶದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಆರೋಪಿಗಳು ಗುಜರಾತ್‌ನಲ್ಲಿ ಸಕ್ರಿಯ ಭಯೋತ್ಪಾದನಾ ಜಾಲವನ್ನು ಸ್ಥಾಪಿಸಲು ಕೆಲಸ ಮಾಡುತ್ತಿದ್ದರು ಎಂದು ಅವರು ಹೇಳಿದ್ದಾರೆ.

ಗುಜರಾತ್ ಮತ್ತು ಮಧ್ಯಪ್ರದೇಶದ ವಿವಿಧ ಜಿಲ್ಲೆಗಳಿಂದ ಗುರುವಾರ ಎಂಟು ಆರೋಪಿಗಳನ್ನು ಬಂಧಿಸಲಾಗಿದೆ. ಇವರು ನಿಷೇಧಿತ ಭಯೋತ್ಪಾದಕ ಸಂಘಟನೆಯಾದ ಜೈಶ್-ಎ-ಮೊಹಮ್ಮದ್‌ನ ಸದಸ್ಯರಾಗಿದ್ದು, ಗುಜರಾತ್‌ನಲ್ಲಿ ಸಕ್ರಿಯ ಭಯೋತ್ಪಾದನಾ ಜಾಲವನ್ನು ಸ್ಥಾಪಿಸಲು ಅದರ ಪರವಾಗಿ ಸಕ್ರಿಯವಾಗಿ ಕೆಲಸ ಮಾಡುತ್ತಿದ್ದರು' ಎಂದು ಎಟಿಎಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬಂಧಿತ ಎಂಟು ಆರೋಪಿಗಳ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) 1967 ಮತ್ತು ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ವಿವಿಧ ಕಲಂಗಳಡಿ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.







ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries