HEALTH TIPS

Arunachal Pradesh | ಭೂಕುಸಿತದಲ್ಲಿ ಇಬ್ಬರು ಮೃತ್ಯು, ನಾಲ್ವರಿಗೆ ಗಾಯ

 ಇಟಾನಗರ: ಅರುಣಾಚಲಪ್ರದೇಶದ ಲೋಹಿತ್ ಜಿಲ್ಲೆಯ ತೇಜು ಬಳಿಯ ಶಿವಾಜಿ ನಗರ ಪ್ರದೇಶದಲ್ಲಿ ನಿರಂತರ ಸುರಿದ ಭಾರೀ ಮಳೆಯಿಂದ ಭೀಕರ ಭೂಕುಸಿದ ಸಂಭವಿಸಿದ್ದು, ಕನಿಷ್ಠ ಇಬ್ಬರು ಮೃತಪಟ್ಟಿದ್ದಾರೆ ಮತ್ತು ಇತರ ನಾಲ್ವರು ಗಾಯಗೊಂಡಿದ್ದಾರೆ.


ಬೆಟ್ಟದ ಭಾಗ ಕುಸಿದು ಬಿದ್ದ ನಂತರ ಐದು ಜನರು ಅವಶೇಷಗಳಡಿ ಸಿಲುಕಿಕೊಂಡಿದ್ದಾರೆ.

ಅವರಲ್ಲಿ ಒಬ್ಬರು ಪಾರಾಗಿದ್ದಾರೆ. ರಕ್ಷಣಾ ತಂಡಗಳು ಎರಡು ಮೃತದೇಹಗಳನ್ನು ಪತ್ತೆ ಹಚ್ಚಿವೆ. ಸಂತ್ರಸ್ತರು ಆ ಪ್ರದೇಶದ ಸ್ಥಳೀಯ ನಿರ್ಮಾಣ ಯೋಜನೆಯೊಂದರಲ್ಲಿ ಕೆಲಸದಲ್ಲಿ ತೊಡಗಿದ್ದ ವಲಸೆ ಕಾರ್ಮಿಕರು ಎಂದು ಹೇಳಲಾಗಿದೆ.

ಲೋಹಿತ್ ಜಿಲ್ಲಾಡಳಿತ ವಿಪತ್ತು ನಿರ್ವಹಣಾ ಅಧಿಕಾರಿಗಳೊಂದಿಗೆ ಸೇರಿ ಸಂತ್ರಸ್ತ ಗ್ರಾಮಗಳಲ್ಲಿ ರಕ್ಷಣೆ ಮತ್ತು ಪರಿಹಾರ ಕಾರ್ಯಾಚರಣೆಯನ್ನು ಆರಂಭಿಸಿದೆ. ಸಿಲುಕಿರುವ ನಿವಾಸಿಗಳನ್ನು ಸ್ಥಳಾಂತರಿಸಲು ಮತ್ತು ಸಂತ್ರಸ್ತ ಕುಟುಂಬಗಳಿಗೆ ನೆರವು ನೀಡಲು ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ಮತ್ತು ಅರುಣಾಚಲ ಪ್ರದೇಶ ಪೊಲೀಸ್ ತಂಡಗಳನ್ನು ನಿಯೋಜಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. 



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries