HEALTH TIPS

Ayodhya Ram Mandir ದೇಣಿಗೆ ಪ್ರಕರಣದಲ್ಲಿ ರಾಜಕೀಯ ಮಾಡಬೇಡಿ; SITಗೆ ತನಿಖೆ ನಡೆಸುವ ಸಾಮರ್ಥ್ಯ ಇದೆ: ಸುಪ್ರೀಂ ಕೋರ್ಟ್

ನವದೆಹಲಿ:  ಅಯೋಧ್ಯೆಯಲ್ಲಿನ ಶ್ರೀರಾಮಮಂದಿರ ದೇಣಿಗೆ ದುರ್ಬಳಕೆ ಆರೋಪ ಪ್ರಕರಣದ ತನಿಖೆಯನ್ನು ರಾಜಕೀಯಗೊಳಿಸಬಾರದು ಎಂದು ಸುಪ್ರೀಂ ಕೋರ್ಟ್ ಸೋಮವಾರ ಎಲ್ಲ ರಾಜಕೀಯ ಪಕ್ಷಗಳಿಗೆ ಎಚ್ಚರಿಕೆ ನೀಡಿದೆ.


ಪ್ರಕರಣದ ಮೇಲ್ನೋಟದ ಸಾಕ್ಷ್ಯಗಳನ್ನು ಮೊದಲಿಗೆ ಬಹಿರಂಗಪಡಿಸಿದ್ದ ತ್ರಿಸದಸ್ಯರ ವಿಶೇಷ ತನಿಖಾ ತಂಡ (SIT)ಗೆ ತನಿಖೆ ನಡೆಸುವ ಸಾಮರ್ಥ್ಯವಿದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ವ್ಯವಹಾರಗಳಲ್ಲಿ ನಡೆದಿದೆ ಎನ್ನಲಾದ ಹಣಕಾಸು ಅಕ್ರಮಗಳ ಕುರಿತು ಸ್ವತಂತ್ರ ತನಿಖೆ ನಡೆಸುವಂತೆ ಕೋರಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾಯಮೂರ್ತಿ ಜೋಯ್ ಮಲ್ಯ ಬಾಗ್ಚಿ ಹಾಗೂ ನ್ಯಾಯಮೂರ್ತಿ ವಿ. ಮೋಹನ ಅವರನ್ನೊಳಗೊಂಡ ನ್ಯಾಯಪೀಠ, ವಿಶೇಷ ತನಿಖಾ ತಂಡವನ್ನು ಮರುರಚಿಸುವ ಕುರಿತು ಉತ್ತರ ಪ್ರದೇಶ ಸರ್ಕಾರದ ಸೂಚನೆಗಳನ್ನು ಪಡೆದು ತಿಳಿಸುವಂತೆ ಸರ್ಕಾರದ ಪರ ಹಾಜರಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರಿಗೆ ನಿರ್ದೇಶನ ನೀಡಿತು.

"ರಾಜಕೀಯ ಮಾಡಬೇಡಿ. ಈ ವಿಷಯವನ್ನು ರಾಜಕೀಯಗೊಳಿಸಬೇಡಿ. ಇದು ಮೇಲ್ನೋಟಕ್ಕೆ ಅಪರಾಧ ನಡೆದಿರುವ ಸರಳ ಪ್ರಕರಣವಾಗಿದೆ. ಈ ಪ್ರಕರಣದ ತನಿಖೆಯನ್ನು ನ್ಯಾಯಯುತ, ನಿಷ್ಪಕ್ಷಪಾತ ಹಾಗೂ ನಿರ್ಲಿಪ್ತವಾಗಿ ನಡೆಸಿ ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಬೇಕು" ಎಂದು ನ್ಯಾಯಪೀಠ ಹೇಳಿತು.

ಅರ್ಜಿಯ ವಿಚಾರಣೆಯನ್ನು ಜುಲೈ 27ಕ್ಕೆ ಮುಂದೂಡಿರುವ ನ್ಯಾಯಾಲಯ, ಆ ವೇಳೆಗೆ ತನಿಖೆಯ ಪ್ರಗತಿಯನ್ನು ಪರಿಶೀಲಿಸಲಿದೆ. ಅಗತ್ಯವಿದ್ದರೆ ಹೆಚ್ಚುವರಿ ನಿರ್ದೇಶನಗಳನ್ನು ನೀಡಬೇಕೇ ಎಂಬ ಕುರಿತು ಮುಂದಿನ ವಿಚಾರಣೆಯಲ್ಲಿ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿತು.








ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries