HEALTH TIPS

ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ವಿರುದ್ಧ ಬಲವಂತದ ಕ್ರಮ ಬೇಡ: ಸುಪ್ರೀಂ ಕೋರ್ಟ್

ವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ ಹಾಗೂ ದೇಶದ ವಿವಿಧ ರಾಜ್ಯಗಳಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗಿಯಾದ ವಿದ್ಯಾರ್ಥಿಗಳ ವಿರುದ್ಧ ಬಲವಂತದ ಕ್ರಮ ತೆಗೆದುಕೊಳ್ಳಕೂಡದು ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ.


ತಿಭಟನಾ ನಿರತ ವಿದ್ಯಾರ್ಥಿಗಳ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಮತ್ತು ಅಪ್ರಾಪ್ತರನ್ನು ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡಿದೆ.

ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಸುಪ್ರೀಂ ಕೋರ್ಟ್ ನೀಡಿರುವ ರಕ್ಷಣೆ ಏನು?

ಪ್ರತಿಭಟನೆಯಲ್ಲಿ ಭಾಗಿಯಾದ ವಿದ್ಯಾರ್ಥಿಗಳ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ. ಆದರೆ, ಈ ನಿರ್ದೇಶನವು ಕ್ರಿಮಿನಲ್ ಹಿನ್ನೆಲೆಯುಳ್ಳವರಿಗೆ ಅನ್ವಯಿಸುವುದಿಲ್ಲ ಎಂದು ನ್ಯಾಯಾಲಯ ತಿಳಿಸಿದೆ.

ಬಂಧಿತ ಅಪ್ರಾಪ್ತ ವಿದ್ಯಾರ್ಥಿಗಳ ಬಗ್ಗೆ ಕೋರ್ಟ್ ಆದೇಶವೇನು?

ದೇಶದ ವಿವಿಧ ರಾಜ್ಯಗಳಲ್ಲಿ ಪೊಲೀಸರು ವಶಕ್ಕೆ ಪಡೆದಿರುವ 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಅಪ್ರಾಪ್ತ ವಿದ್ಯಾರ್ಥಿಗಳನ್ನು ತಕ್ಷಣವೇ ಬಿಡುಗಡೆ ಮಾಡಬೇಕೆಂದು ಸುಪ್ರೀಂ ಕೋರ್ಟ್ ಆದೇಶಿಸಿದೆ.

ಘಟನೆಯ ತನಿಖೆಗೆ ನ್ಯಾಯಾಲಯವು ಯಾವ ಕ್ರಮ ಕೈಗೊಂಡಿದೆ?

ಪ್ರತಿಭಟನೆ ವೇಳೆ ಪೊಲೀಸ್ ಬಲಪ್ರಯೋಗದ ಆರೋಪಗಳ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಲು ಉನ್ನತ ಮಟ್ಟದ ಸಮಿತಿಯನ್ನು ರಚಿಸುವ ಪ್ರಸ್ತಾಪವನ್ನು ನ್ಯಾಯಾಲಯ ಮಾಡಿದೆ. ವಿಚಾರಣೆಯ ಹಿನ್ನೆಲೆಯಲ್ಲಿ ದೆಹಲಿ ಸೇರಿದಂತೆ ವಿವಿಧ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ನೋಟಿಸ್ ಜಾರಿಗೊಳಿಸಲಾಗಿದೆ.

ಪ್ರತಿಭಟನಾಕಾರರ ಡಿಜಿಟಲ್ ಮಾಹಿತಿಯ ಭದ್ರತೆಗಾಗಿ ಕೋರ್ಟ್ ನೀಡಿರುವ ಸೂಚನೆಗಳೇನು?

ಪ್ರತಿಭಟನೆಗೆ ಸಂಬಂಧಿಸಿದ ಸಿಸಿಟಿವಿ ದೃಶ್ಯಗಳು, ಡ್ರೋನ್ ಚಿತ್ರೀಕರಣ, ಬಾಡಿ ಕ್ಯಾಮೆರಾ ದೃಶ್ಯಗಳು ಮತ್ತು ವೈರ್‌ಲೆಸ್ ದಾಖಲೆಗಳನ್ನು ಸಂರಕ್ಷಿಸಬೇಕು ಎಂದು ಕೋರ್ಟ್ ಸೂಚಿಸಿದೆ. ಅಲ್ಲದೆ, ಪ್ರತಿಭಟನಾಕಾರರ ವೈಯಕ್ತಿಕ ಮತ್ತು ಡಿಜಿಟಲ್ ಮಾಹಿತಿಯನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಬಾರದೆಂದು ಎಚ್ಚರಿಕೆ ನೀಡಿದೆ.

ಪ್ರತಿಭಟನೆಗಳ ನಿರ್ವಹಣೆಗೆ ಸಂಬಂಧಿಸಿದಂತೆ ನ್ಯಾಯಾಲಯದ ಮುಂದಿನ ಆಲೋಚನೆಯೇನು?

ಈ ರೀತಿಯ ಪ್ರತಿಭಟನೆಗಳು ಅಥವಾ ತುರ್ತು ಪರಿಸ್ಥಿತಿಗಳನ್ನು ನಿರ್ವಹಿಸಲು ಪರಿಣಾಮಕಾರಿ ಕಾರ್ಯವಿಧಾನದ ಅವಶ್ಯಕತೆಯಿದೆ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ. ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆಗಳು ಸಹಜ ಎಂಬುದನ್ನು ಒಪ್ಪಿಕೊಂಡ ನ್ಯಾಯಾಲಯ, ಈಗಿರುವ ಕಾರ್ಯವಿಧಾನದಲ್ಲಿ ಬದಲಾವಣೆ ತರುವ ಸುಳಿವು ನೀಡಿದೆ.

ಜೊತೆಗೆ ವಿವಿಧ ರಾಜ್ಯಗಳಲ್ಲಿ ಪೊಲೀಸರು ವಶಕ್ಕೆ ಪಡೆದಿರುವ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿಗಳನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದೂ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ ಹಾಗೂ ನ್ಯಾಯಮೂರ್ತಿಗಳಾದ ಜಾಯ್‌ಮಾಲ್ಯಾ ಬಾಗ್ಚಿ ಅವರಿದ್ದ ಪೀಠ ಹೇಳಿತು.

ಆದರೆ ಕ್ರಿಮಿನಲ್ ಹಿನ್ನೆಲೆಯುಳ್ಳವರಿಗೆ ಇದು ಅನ್ವಯಿಸದು ಎಂದು ಕೋರ್ಟ್ ಸ್ಪಷ್ಟಪಡಿಸಿದೆ.

ಪ್ರತಿಭಟನೆ ವೇಳೆ ಪೊಲೀಸರು ಅತಿಯಾದ ಬಲಪ್ರಯೋಗ ನಡೆಸಿದ್ದಾರೆ ಎಂಬ ಆರೋಪಗಳು ಮೇಲ್ನೋಟಕ್ಕೆ ಸರಿ ಎಂದು ಕಂಡು ಬಂದಿದ್ದು, ನ್ಯಾಯಸಮ್ಮತ ಮತ್ತು ಸ್ವತಂತ್ರ ತನಿಖೆಗೆ ಅರ್ಹವಾಗಿವೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ಈ ಹಿನ್ನೆಲೆಯಲ್ಲಿ, ಘಟನೆಗಳ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಲು ಉನ್ನತ ಮಟ್ಟದ ಸಮಿತಿಯನ್ನು ರಚಿಸುವ ಪ್ರಸ್ತಾಪವನ್ನು ನ್ಯಾಯಾಲಯ ಮುಂಡಿಟ್ಟಿದೆ.

ಅದಕ್ಕೂ ಮುನ್ನ ಕೇಂದ್ರ ಸರ್ಕಾರ ಮತ್ತು ದೆಹಲಿ ಪೊಲೀಸರಿಗೆ ತಮ್ಮ ನಿಲುವು ಸಲ್ಲಿಸಲು ಅವಕಾಶ ನೀಡಿದೆ. ಹಿಂಸಾಚಾರ ನಡೆದಿರುವ ಇತರೆ ರಾಜ್ಯಗಳಿಗೂ ತಮ್ಮ ಅಭಿಪ್ರಾಯ ಸಲ್ಲಿಸಲೂ ಕೋರ್ಟ್ ಸೂಚಿಸಿದೆ. ಹೀಗಾಗಿ ದೆಹಲಿ, ಮಹಾರಾಷ್ಟ್ರ, ಬಿಹಾರ, ಕೇರಳಂ, ಮಧ್ಯಪ್ರದೇಶ ಮತ್ತು ಉತ್ತರ ಪ್ರದೇಶದ ಮುಖ್ಯ ಕಾರ್ಯದರ್ಶಿಗಳಿಗೆ ನೋಟಿಸ್ ಜಾರಿಗೊಳಿಸಲಾಗಿದೆ.

ಇದೇ ವೇಳೆ, ಪ್ರತಿಭಟನೆಗಳಿಗೆ ಸಂಬಂಧಿಸಿದ ಸಿಸಿಟಿವಿ ದೃಶ್ಯಗಳು, ಡ್ರೋನ್ ಚಿತ್ರೀಕರಣ, ವೈರ್‌ಲೆಸ್ ಸಂವಹನ ದಾಖಲೆಗಳು, ಬಾಡಿ ಕ್ಯಾಮೆರಾ ದೃಶ್ಯಗಳು ಹಾಗೂ ಇತರೆ ದಾಖಲೆಗಳನ್ನು ಸಂರಕ್ಷಿಸಬೇಕು ಎಂದು ನ್ಯಾಯಾಲಯ ಆದೇಶಿಸಿದೆ.

ಪ್ರತಿಭಟನಾಕಾರರ ಡಿಜಿಟಲ್ ಹಾಗೂ ವೈಯಕ್ತಿಕ ಮಾಹಿತಿಯನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಬಾರದು ಎಂದು ಸ್ಪಷ್ಟ ನಿರ್ದೇಶನ ನೀಡಿದೆ.

ಪ್ರತಿಭಟನೆ ವೇಳೆ ಪೆಲೆಟ್ ಗನ್‌ಗಳನ್ನು ಬಳಸಲಾಗಿದ್ದು, ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಒಬ್ಬ ವಿದ್ಯಾರ್ಥಿ ದೃಷ್ಟಿ ಕಳೆದುಕೊಂಡಿದ್ದಾನೆ ಎಂಬ ಆರೋಪವನ್ನೂ ನ್ಯಾಯಾಲಯದ ಗಮನಕ್ಕೆ ತರಲಾಯಿತು. ಇದಲ್ಲದೆ, ರಬ್ಬರ್ ಗುಂಡುಗಳು, ವಿದ್ಯುತ್ ಬ್ಯಾಟನ್‌ಗಳು ಹಾಗೂ ಮೊಳೆಗಳನ್ನು ಅಳವಡಿಸಿದ ಲಾಠಿಗಳನ್ನು ಬಳಸಲಾಗಿದೆ, ನಾಗರಿಕರ ಉಡುಪಿನಲ್ಲಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು ಎನ್ನುವುದನ್ನೂ ನ್ಯಾಯಾಲಯದ ಮುಂದೆ ಅರುಹಲಾಯಿತು.

ಪ್ರತಿಭಟನೆಗೆ ಅಪರಾಧ ಹಿನ್ನೆಲೆಯುಳ್ಳವರೂ ನುಸುಳಿ ಪೊಲೀಸರ ಮೇಲೂ ಹಲ್ಲೆ ನಡೆಸಿದ್ದಾರೆ ಎಂದು ಇನ್ನೊಂದೆಡೆ, ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಇದೇ ವೇಳೆ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಪ್ರತಿಭಟನೆಗಳ ಕುರಿತು ಹೊಸ ಕಾರ್ಯವಿಧಾನ ಅಗತ್ಯ

ಹಿಂದಿನ ತೀರ್ಪುಗಳಲ್ಲಿ ನ್ಯಾಯಾಲಯ ರೂಪಿಸಿದ್ದ ಪ್ರತಿಭಟನೆಗಳ ಕಾರ್ಯವಿಧಾನಗಳಲ್ಲಿ ಬದಲಾವಣೆ ಮಾಡಬೇಕಾಗಬಹುದು ಎಂದು ನ್ಯಾಯಪೀಠ ಇದೇ ವೇಳೆ ಅಭಿಪ್ರಾಯಪಟ್ಟಿತು. ಇಂತಹ ಪ್ರತಿಭಟನೆಗಳು ಅಥವಾ ತುರ್ತು ಪರಿಸ್ಥಿತಿಗಳು ಉಂಟಾದಾಗ ಕಾರ್ಯನಿರ್ವಹಿಸಲು ಪರಿಣಾಮಕಾರಿ ವ್ಯವಸ್ಥೆ ರೂಪಿಸಬೇಕಾಗಿದೆ ಎಂದು ಹೇಳಿತು.

'ಪ್ರಜಾಪ್ರಭುತ್ವದಲ್ಲಿ ಇಂತಹ ಪ್ರತಿಭಟನೆಗಳು ನಡೆಯುವುದು ಸಹಜ' ಎಂದು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅಭಿಪ್ರಾಯಪಟ್ಟರು. ವಿಚಾರಣೆಯನ್ನು ಮುಂದಿನ ವಾರಕ್ಕೆ ಮುಂದೂಡಲಾಯಿತು.

ಮುಖ್ಯಾಂಶಗಳು

ಅಪರಾಧ ಹಿನ್ನೆಲೆ ಇಲ್ಲದ ಪ್ರತಿಭಟನಾಕಾರರ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು.

ಪ್ರತಿಭಟನೆ ವೇಳೆ ಬಂಧಿಸಲಾದ 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಎಲ್ಲ ಮಕ್ಕಳನ್ನು ಬಿಡುಗಡೆ ಮಾಡಬೇಕು.

ಪ್ರತಿಭಟನಾಕಾರರ ಡಿಜಿಟಲ್ ಮತ್ತು ವೈಯಕ್ತಿಕ ಮಾಹಿತಿಯನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಕೂಡದು.

ಸಿಸಿಟಿವಿ, ಡ್ರೋನ್, ಬಾಡಿ ಕ್ಯಾಮೆರಾ, ವೈರ್‌ಲೆಸ್ ಸಂವಹನ ದಾಖಲೆಗಳು ಹಾಗೂ ಪಿಸಿಆರ್ ಕರೆಗಳ ದಾಖಲೆಗಳನ್ನು ಸಂರಕ್ಷಿಸಬೇಕು.

ದೆಹಲಿ, ಮಹಾರಾಷ್ಟ್ರ, ಬಿಹಾರ, ಕೇರಳಂ, ಮಧ್ಯಪ್ರದೇಶ ಮತ್ತು ಉತ್ತರ ಪ್ರದೇಶದ ಮುಖ್ಯ ಕಾರ್ಯದರ್ಶಿಗಳಿಗೆ ನೋಟಿಸ್ ಜಾರಿಯಾಗಿದೆ.








ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries