HEALTH TIPS

'ರಾಷ್ಟ್ರೀಯ ವಯೋಶ್ರೀ ಯೋಜನೆ'ಯ ತಪಾಸಣಾ ಶಿಬಿರಕ್ಕೆ ಚಾಲನೆ

ಕಾಸರಗೋಡು: ಹಿರಿಯ ನಾಗರಿಕರಿಗೆ ಹಾಗೂ ದಿವ್ಯಾಂಗರಿಗೆ ಉಚಿತವಾಗಿ ಸಹಾಯೋಪಕರಣ ವಿತರಿಸುವ ಕೇಂದ್ರ ಸರ್ಕಾರದ 'ರಾಷ್ಟ್ರೀಯ ವಯೋಶ್ರೀ ಯೋಜನೆ'ಯ ತಪಾಸಣಾ ಶಿಬಿರವನ್ನು ಉಳಿಯತ್ತಡ್ಕದ ಅಟಲ್ ಜಿ ಕಮ್ಯೂನಿಟಿ ಹಾಲ್‍ನಲ್ಲಿ ಆಯೋಜಿಸಲಾಯಿತು. ಪ್ರಧಾನಮಂತ್ರಿ ದಿವ್ಯಾಂಗ ಕೇಂದ್ರ ಹಾಗೂ ವಿಕಸಿತ ಕೇರಳ ಕಾಸರಗೋಡು ಜಿಲ್ಲಾ ಹೆಲ್ಪ್‍ಡೆಸ್ಕ್‍ನ ಜಂಟಿ ಆಶ್ರಯದಲ್ಲಿ ಶಿಬಿರ ಆಯೋಜಿಸಲಾಗಿತ್ತು.  


ಬಿಜೆಪಿ ಜಿಲ್ಲಾ ಸಮಿತಿ ಅಧ್ಯಕ್ಷೆ ಎಂ.ಎಲ್. ಅಶ್ವಿನಿ ಶಿಬಿರ ಉದ್ಘಾಟಿಸಿ ಮಾತನಾಡಿ,  ಹಿರಿಯ ನಾಗರಿಕರು ಮತ್ತು ದಿವ್ಯಾಂಗರಿಗೆ ಉಚಿತವಾಗಿ ಸಹಾಯೋಪಕರಣಗಳನ್ನು ನೀಡುವ ಈ ಯೋಜನೆಯು, ದೇಶದ ಜನತೆಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗಿರುವ ಕಾಳಜಿಗೆ ಉತ್ತಮ ನಿದರ್ಶನವಾಗಿದೆ ಎಂದು ತಿಳಿಸಿದರು. ಬಿಜೆಪಿ ಮಧೂರು ಈಸ್ಟ್ ಏರಿಯಾ ಸಮಿತಿ ಅಧ್ಯಕ್ಷ ಮಹೇಶ್ ಮಧೂರು ಅಧ್ಯಕ್ಷತೆ ವಹಿಸಿದ್ದರು.

ದಿವ್ಯಾಂಗ ಕೇಂದ್ರವನ್ನು ಪ್ರತಿನಿಧಿಸಿ ಡಾ. ಗೋಕುಲ್, ಅಭಿನವ್, ಆಡಿಯಾಲಜಿಸ್ಟ್ ಡಾ. ಮಧುಶ್ರೀ ಹಾಗೂ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ.ಆರ್. ಸುನಿಲ್, ಜಿಲ್ಲಾ ಸೆಲ್ ಕೋ-ಆರ್ಡಿನೇಟರ್ ಸುಕುಮಾರ್ ಕುದ್ರೆಪ್ಪಾಡಿ, ಮಧೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಜ್ಞಾನಿ ಶಾನ್‍ಭಾಗ್, ಉಪಾಧ್ಯಕ್ಷ ಭಾನುಪ್ರಕಾಶ್, ಮಧೂರು ಗ್ರಾಮ ಪಂಚಾಯತ್ ಜನಪ್ರತಿನಿಧಿಗಳು, ಮೊಗ್ರಾಲ್ ಪುತ್ತೂರು ಗ್ರಾಮ ಪಂಚಾಯಿತಿ ಪ್ರತಿನಿಧಿ ಪ್ರಮೀಳಾ ಮಜಲ್, ಮಧೂರು ಈಸ್ಟ್ ಏರಿಯಾ ಪ್ರಧಾನ ಕಾರ್ಯದರ್ಶಿ ಅನಿಲ್ ಪಕ್ಕಳ ಉಪಸ್ಥಿತರಿದ್ದರು. 

ಜುಲೈ 22 ರಂದು ಮುಳ್ಳೇರಿಯ ಶ್ರೀ ಗಣೇಶ ಕಲಾಮಂದಿರ, ಜುಲೈ 23 ರಂದು ಕುತ್ತಿಕ್ಕೋಲ್ ಸೋಪಾನಂ ಆಡಿಟೋರಿಯಂ ಹಾಗೂ ಜುಲೈ 24 ರಂದು ಬಳಾಂತೋಡ್ ಮಿಲ್ಮಾ ಹಾಲ್‍ನಲ್ಲಿ ವಯೋಶ್ರೀ ಯೋಜನೆ ತಪಾಸಣಾ ಶಿಬಿರಗಳು ನಡೆಯಲಿವೆ. 


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries