HEALTH TIPS

ರಕ್ಷಣೆ, ಯುರೇನಿಯಂ ರಫ್ತು ಸೇರಿ ಮಹತ್ವದ ಒಪ್ಪಂದಗಳಿಗೆ ಭಾರತ-ಆಸ್ಟ್ರೇಲಿಯಾ ಸಹಿ

 ನವದೆಹಲಿ: ಕಡಲ ಭದ್ರತೆ, ಪರಮಾಣು ಇಂಧನ ಮತ್ತು ಖನಿಜ ಸಂಪನ್ಮೂಲಗಳಂತಹ ಹಲವು ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಹಕಾರವನ್ನು ಬಲಪಡಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಅಲ್ಬನೀಸ್ ಅವರು ಹಲವು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಿದ್ದಾರೆ. 


ಸಭೆಯ ಬಳಿಕ ಉಭಯ ನಾಯಕರು ಇಂಧನ, ಸೈಬರ್ ಭದ್ರತೆ, ತಂತ್ರಜ್ಞಾನ ಮತ್ತು ಪೂರೈಕೆ ಸರಪಳಿಗಳಲ್ಲಿನ ಸಹಯೋಗದ ನೀಲನಕ್ಷೆಯನ್ನು ಬಿಡುಗಡೆ ಮಾಡಿದ್ದಾರೆ.

ಪರಮಾಣು ಸಹಕಾರ ಒಪ್ಪಂದದ ಭಾಗವಾಗಿ ಆಸ್ಟ್ರೇಲಿಯಾವು ಭಾರತಕ್ಕೆ ಯುರೇನಿಯಂ ರಫ್ತು ಮಾಡಲಿದ್ದು, ಪರಮಾಣು ವಿದ್ಯುತ್ ಯೋಜನೆಗಳಿಗೆ ಅನುಕೂಲವಾಗಲಿದೆ ಎಂದು ವರದಿಯಾಗಿದೆ.

'ಇಂದು ನಾವು ಪರಮಾಣು ಸಹಕಾರ ಕ್ಷೇತ್ರದಲ್ಲಿ ಪ್ರಮುಖ ಒಪ್ಪಂದಕ್ಕೆ ಸಹಿ ಹಾಕಿದ್ದೇವೆ. ಇದು ಆಸ್ಟ್ರೇಲಿಯಾದಿಂದ ಭಾರತಕ್ಕೆ ಯುರೇನಿಯಂ ಪೂರೈಕೆಗೆ ದಾರಿ ಮಾಡಿಕೊಡಲಿದೆ. ಇದರಿಂದ ನಮ್ಮ ಶುದ್ಧ ಇಂಧನ ಉದ್ದೇಶಗಳಿಗೆ ಹೊಸ ಉತ್ತೇಜನ ಸಿಗಲಿದೆ' ಎಂದು ಮೋದಿ ತಿಳಿಸಿದ್ದಾರೆ.

ರಕ್ಷಣಾ ಕ್ಷೇತ್ರ ಸೇರಿದಂತೆ ಉಭಯ ದೇಶಗಳು ನಿರ್ಣಾಯಕ ಖನಿಜಗಳ ಕಾರಿಡಾರ್ ಕುರಿತು ಒಟ್ಟಾಗಿ ಕೆಲಸ ಮಾಡಲಿವೆ ಎಂದೂ ಅವರು ಹೇಳಿದ್ದಾರೆ.

'ಇಂಡೋ-ಪೆಸಿಫಿಕ್ ಕೇವಲ ಎರಡು ಸಾಗರಗಳ ಸಂಗಮವಲ್ಲ. ಇದು ಭಾರತ ಮತ್ತು ಆಸ್ಟ್ರೇಲಿಯಾದಂತಹ ಸಮಾನ ಮನಸ್ಕ ಪ್ರಜಾಪ್ರಭುತ್ವ ರಾಷ್ಟ್ರಗಳ ಕೊಡು-ಕೊಳ್ಳುವಿಕೆ ಆಕಾಂಕ್ಷೆಗಳನ್ನು ಪ್ರತಿಬಿಂಬಿಸುತ್ತದೆ' ಎಂದಿದ್ದಾರೆ.

'ನಾವು ರಕ್ಷಣಾ ಪಾಲುದಾರಿಕೆಯಲ್ಲಿ ಸಹಕಾರವನ್ನು ಹೆಚ್ಚಿಸಲು ಪ್ರಮುಖ ಜಂಟಿ ಪ್ರಕಟಣೆಯನ್ನು ಹೊರಡಿಸಿದ್ದೇವೆ. ಭಾರತ-ಆಸ್ಟ್ರೇಲಿಯಾ ರಕ್ಷಣಾ ನಾವೀನ್ಯತೆ ಕಾರಿಡಾರ್ ಮೂಲಕ ಹೊಸ ಸ್ಟಾರ್ಟ್‌ಅಪ್‌ಗಳು ಮತ್ತು ಕೈಗಾರಿಕೆಗಳನ್ನು ಸ್ಥಾಪಿಸಲು ಒಟ್ಟಾಗಿ ಕೆಲಸ ಮಾಡಲಿದ್ದೇವೆ' ಎಂದು ಹೇಳಿದ್ದಾರೆ.

ಭಾರತ-ಆಸ್ಟ್ರೇಲಿಯಾ ಕಡಲ ಭದ್ರತಾ ಸಹಯೋಗದ ಮಾರ್ಗಸೂಚಿಯು ಇಂಡೋ-ಪೆಸಿಫಿಕ್ ಪ್ರದೇಶದಲ್ಲಿನ ಜಂಟಿ ಪ್ರಯತ್ನಗಳಿಗೆ ಹೊಸ ವೇಗವನ್ನು ನೀಡಲಿದೆ. ಜತೆಗೆ, ಹಡಗು ನಿರ್ಮಾಣ, ಹಡಗು ದುರಸ್ತಿ ಮತ್ತು ನಿರ್ವಹಣೆಯಲ್ಲೂ ಒಟ್ಟಿಗೆ ಮುನ್ನಡೆಯಲಿದ್ದೇವೆ ಎಂದು ಮೋದಿ ಪ್ರಕಟಿಸಿದ್ದಾರೆ.

ಭಯೋತ್ಪಾದನೆಯು ಕೇವಲ ಒಂದು ದೇಶಕ್ಕೆ ಸೀಮಿತವಾಗಿಲ್ಲ. ಬದಲಾಗಿ ಇಡೀ ಮಾನವಕುಲಕ್ಕೆ ಗಂಭೀರ ಸವಾಲಾಗಿದೆ ಎಂಬುದನ್ನು ಭಾರತ ಮತ್ತು ಆಸ್ಟ್ರೇಲಿಯಾ ಮನಗಂಡಿವೆ. ಆದ್ದರಿಂದ, ಭಯೋತ್ಪಾದನೆ ವಿರುದ್ಧದ ನಮ್ಮ ಹೋರಾಟವು ಜಂಟಿಯಾಗಿದೆ. ನಮ್ಮ ಸಂಕಲ್ಪವೂ ಅಚಲವಾಗಿದೆ ಎಂದಿದ್ದಾರೆ.

'ವಿಶ್ವದ ಹಲವು ಭಾಗಗಳಲ್ಲಿ ನಡೆಯುತ್ತಿರುವ ಉದ್ವಿಗ್ನತೆ ಮತ್ತು ಸಂಘರ್ಷಗಳನ್ನು ಮಾತುಕತೆ ಮತ್ತು ರಾಜತಾಂತ್ರಿಕತೆಯ ಮೂಲಕ ಮಾತ್ರ ಪರಿಹರಿಸಬಹುದು ಎಂದು ನಾವು ನಂಬುತ್ತೇವೆ. ಒಟ್ಟಾಗಿ, ನಾವು ಇಂಡೋ-ಪೆಸಿಫಿಕ್ ಪ್ರದೇಶದಾದ್ಯಂತ ಶಾಂತಿ, ಸ್ಥಿರತೆ, ನೌಕಾಯಾನದ ಸ್ವಾತಂತ್ರ್ಯ ಮತ್ತು ನಿಯಮ ಆಧಾರಿತ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುತ್ತೇವೆ' ಎಂದಿದ್ದಾರೆ.

ಭಾರತದಲ್ಲಿ ಹೂಡಿಕೆ ಮಾಡುವಂತೆ ಆಸ್ಟ್ರೇಲಿಯಾದ ಉದ್ಯಮಿಗಳಿಗೆ ಆಹ್ವಾನ ನೀಡಿದ ಮೋದಿ, ಪ್ರಸ್ತಾವಿತ ಸಮಗ್ರ ಆರ್ಥಿಕ ಸಹಕಾರ ಒಪ್ಪಂದದ ಕುರಿತು ಕಾರ್ಯಪ್ರವೃತ್ತರಾಗಲು ಎರಡೂ ಕಡೆಯವರು ನಿರ್ಧರಿಸಿದ್ದಾರೆ. ಹಾಗೆಯೇ, ಉಭಯ ದೇಶಗಳು ದ್ವಿಪಕ್ಷೀಯ ಹೂಡಿಕೆ ಒಪ್ಪಂದದ ಕಡೆಗೂ ಕೆಲಸ ಮಾಡಲಿವೆ ಎಂದು ಅವರು ಭರವಸೆ ನೀಡಿದ್ದಾರೆ.

ಆಸ್ಟ್ರೇಲಿಯಾ ಪ್ರಧಾನಿ ಆಂಥೊನಿ ಅಲ್ಬನೀಸ್ ಮಾತನಾಡಿ, ಭಾರತದೊಂದಿಗೆ ಆಸ್ಟ್ರೇಲಿಯಾ ಹೊಂದಿರುವ ಸಂಬಂಧವು ಇಂದಿನಷ್ಟು ಮಹತ್ವದ್ದಾಗಿರಲಿಲ್ಲ. ಭಾರತ-ಆಸ್ಟ್ರೇಲಿಯಾ ದ್ವಿಪಕ್ಷೀಯ ಬಾಂಧವ್ಯವನ್ನು ವೈವಿಧ್ಯಗೊಳಿಸುವತ್ತ ನಾವು ಗಮನ ಹರಿಸಿದ್ದೇವೆ ಎಂದು ಹೇಳಿದ್ದಾರೆ.

'ಮೋದಿ ಅವರೊಂದಿಗೆ ಜಂಟಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅಲ್ಬನೀಸ್, 2015ರ ಆಸ್ಟ್ರೇಲಿಯಾ-ಭಾರತ ಪರಮಾಣು ಸಹಕಾರ ಒಪ್ಪಂದದ ನಂತರ ಎರಡು ರಾಷ್ಟ್ರಗಳ ನಡುವಿನ ದ್ವಿಪಕ್ಷೀಯ ಇಂಧನ ಮತ್ತು ಕಾರ್ಯತಂತ್ರದ ಸಹಕಾರದಲ್ಲಿ ಇದು ಒಂದು ಪ್ರಮುಖ ಮೈಲಿಗಲ್ಲು' ಎಂದು ಶ್ಲಾಘಿಸಿದ್ದಾರೆ.

'2015ರ ಆಸ್ಟ್ರೇಲಿಯಾ-ಭಾರತ ಪರಮಾಣು ಸಹಕಾರ ಒಪ್ಪಂದದ ಅಡಿಯಲ್ಲಿ ಶಾಂತಿಯುತ ಉದ್ದೇಶಗಳಿಗಾಗಿ ಭಾರತಕ್ಕೆ ಯುರೇನಿಯಂ ರಫ್ತು ಮಾಡುತ್ತೇವೆ' ಎಂದು ಅಲ್ಬನೀಸ್ ದೃಢಪಡಿಸಿದ್ದಾರೆ. 








ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries