HEALTH TIPS

ಸಿಇಒ ನೇಮಕಕ್ಕಾಗಿ ರಾಮ ಮಂದಿರ ಟ್ರಸ್ಟ್ ನಿಯಮಗಳಿಗೆ ತಿದ್ದುಪಡಿ?

 ಅಯೋಧ್ಯೆ: ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ಗೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ)ಯನ್ನು ನೇಮಿಸುವುದಕ್ಕಾಗಿ ಟ್ರಸ್ಟ್‌ನ ನಿಯಮಗಳಿಗೆ ತಿದ್ದುಪಡಿ ತರುವ ಸಾಧ್ಯತೆಯಿದೆ ಎಂದು ಟ್ರಸ್ಟ್‌ನೊಂದಿಗೆ ನಿಕಟವಾಗಿ ಗುರುತಿಸಿಕೊಂಡಿರುವ ವ್ಯಕ್ತಿಯೊಬ್ಬರು ಗುರುವಾರ ತಿಳಿಸಿದ್ದಾರೆ. 


ಟ್ರಸ್ಟ್ ತನ್ನ ಪ್ರಸ್ತುತ ಬ್ಯಾಂಕಿಂಗ್ ವ್ಯವಸ್ಥೆಯಲ್ಲೂ ಬದಲಾವಣೆಯನ್ನು ತರಲು ಯೋಚಿಸುತ್ತಿದೆ ಎಂದು ಆ ವ್ಯಕ್ತಿ ಹೇಳಿದ್ದಾರೆ. ಪ್ರಸ್ತುತ ಟ್ರಸ್ಟ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಪಂಜಾಬ್ ನ್ಯಾಶನಲ್ ಬ್ಯಾಂಕ್ ಮತ್ತು ಬ್ಯಾಂಕ್ ಆಫ್ ಬರೋಡಾಗಳಲ್ಲಿ ಖಾತೆಗಳನ್ನು ಹೊಂದಿದೆ.

2020 ಫೆಬ್ರವರಿಯಲ್ಲಿ ಟ್ರಸ್ಟ್ ರಚನೆಯಾದಾಗ ನಿಯಮಗಳನ್ನು ರೂಪಿಸಿದ್ದ ಟ್ರಸ್ಟ್‌ನ ಕೋಶಾಧಿಕಾರಿ ಗೋವಿಂದ್ ದೇವ್ ಗಿರಿ ಮತ್ತು ಟ್ರಸ್ಟಿ ಹಾಗೂ ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ ಕೆ. ಪರಾಶರನ್ ಈ ಬದಲಾವಣೆಗಳ ಬಗ್ಗೆ ಈಗಾಗಲೇ ಚರ್ಚಿಸಿದ್ದಾರೆ ಎನ್ನಲಾಗಿದೆ.

''ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯನ್ನು ನೇಮಿಸಲು ಹಾಗೂ ಟ್ರಸ್ಟ್‌ನಲ್ಲಿ ಆಡಳಿತಾತ್ಮಕ ಮತ್ತು ಹಣಕಾಸಿನ ಬದಲಾವಣೆಗಳನ್ನು ತರಲು, ಅದರ ನಿಯಮಗಳಿಗೆ ತಿದ್ದುಪಡಿ ತರುವುದು ಅಗತ್ಯವಾಗಿದೆ ಎಂದು ಟ್ರಸ್ಟ್‌ನ ಹಿರಿಯ ಪದಾಧಿಕಾರಿಯೊಬ್ಬರು ಹೇಳಿದ್ದಾರೆ.

ಹಣ ಎಣಿಕೆ ವ್ಯವಸ್ಥೆಯಲ್ಲಿ ಗಂಭೀರ ಲೋಪಗಳನ್ನು ವಿಶೇಷ ತನಿಖಾ ತಂಡದ ಪ್ರಾಥಮಿಕ ತನಿಖೆಯು ಬಹಿರಂಗಪಡಿಸಿದ ನಂತರ, ಟ್ರಸ್ಟ್ ತನ್ನ ಆಡಳಿತಾತ್ಮಕ ಮತ್ತು ಹಣಕಾಸು ಚೌಕಟ್ಟನ್ನು ಮರುಪರಿಶೀಲಿಸುತ್ತಿದೆ. ಹೊಣೆಗಾರಿಕೆಯನ್ನು ಬಲಪಡಿಸುವುದು, ಮೇಲ್ವಿಚಾರಣೆಯನ್ನು ಕಠಿಣಗೊಳಿಸುವುದು ಮತ್ತು ಇಂತಹ ಘಟನೆಗಳು ಮರುಕಳಿಸದಂತೆ ತಡೆಯುವುದು ಇದರ ಉದ್ದೇಶವಾಗಿದೆ ಎಂದು ಅವರು ತಿಳಿಸಿದ್ದಾರೆ.

ಜುಲೈ 22 ರಂದು ಅಯೋಧ್ಯೆಯಲ್ಲಿ ನಡೆಯಲಿರುವ ಮುಂದಿನ ಕಾರ್ಯಕಾರಿ ಸಮಿತಿ ಸಭೆಯಲ್ಲಿ ನಿಯಮಗಳಿಗೆ ಬದಲಾವಣೆಗಳನ್ನು ತರುವ ಪ್ರಸ್ತಾವ ಹಾಗೂ ಖಾಲಿ ಇರುವ ಹುದ್ದೆಗಳಿಗೆ ಹೊಸ ಟ್ರಸ್ಟಿಗಳನ್ನು ನೇಮಿಸುವ ಪ್ರಸ್ತಾವವನ್ನು ಮಂಡಿಸಲು ಟ್ರಸ್ಟ್ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ. 









ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries