'ಸಂಯುಕ್ತ ಕಿಸಾನ್ ಮೋರ್ಚಾ' ಕೇಂದ್ರ ಸರಕಾರದ ಕೃಷಿ ಕಾಯ್ದೆಗಳ ವಿರುದ್ಧ ಒಂದು ವರ್ಷಗಳ ಕಾಲ ನಡೆದ ರೈತರ ಪ್ರತಿಭಟನೆಯ ನೇತೃತ್ವ ವಹಿಸಿತ್ತು.
ಪ್ರತಿಭಟನಕಾರಿಗೆ ಬೆಂಬಲ ಸೂಚಿಸಲು 'ಸಂಯುಕ್ತ ಕಿಸಾನ್ ಮೋರ್ಚಾ'ದ ನಿಯೋಗವೊಂದು ರವಿವಾರ ಪ್ರತಿಭಟನೆಯಲ್ಲಿ ಭಾಗಿಯಾಗಲಿದೆ.
ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಅಧ್ಯಕ್ಷ ಅಭಿಜಿತ್ ದೀಪ್ಕೆ ಅವರಿಗೆ ಬರೆದ ಪತ್ರದಲ್ಲಿ 'ಸಂಯುಕ್ತ ಕಿಸಾನ್ ಮೋರ್ಚಾ', ಈ ಶಾಂತಿಯುತ ಪ್ರತಿಭಟನೆ ಹಾಗೂ ಅದರಲ್ಲಿ ಭಾಗವಹಿಸುತ್ತಿರುವ ವಿದ್ಯಾರ್ಥಿಗಳು, ಯುವ ಜನರು ಮತ್ತು ಅವರ ಕುಟುಂಬಗಳಿಗೆ ನಾವು ಬೆಂಬಲ ನೀಡುತ್ತೇವೆ ಎಂದು ಹೇಳಿದೆ.
ತಮ್ಮ ನಿಯೋಗ ರವಿವಾರ ಬೆಳಗ್ಗೆ 11 ಗಂಟೆಗೆ ಜಂತರ್ ಮಂತರ್ ತಲುಪಲಿದೆ ಎಂದು 'ಸಂಯುಕ್ತ ಕಿಸಾನ್ ಮೋರ್ಚಾ' ತಿಳಿಸಿದೆ.

