HEALTH TIPS

ನಾಗಾಲ್ಯಾಂಡ್‌ನಲ್ಲಿ ಭೂಕುಸಿತ: ಎಂಟು ಜನ ಸಾವು, ಹಲವರು ನಾಪತ್ತೆ

 ಕೊಹಿಮಾ: ನಾಗಾಲ್ಯಾಂಡ್‌ನ ಮೋನ್ ಜಿಲ್ಲೆಯಲ್ಲಿ ಭಾನುವಾರ ಸುರಿದ ಧಾರಾಕಾರ ಮಳೆಗೆ ಭೂಕುಸಿತ, ಹಠಾತ್ ಪ್ರವಾಹ ಉಂಟಾಗಿದ್ದು, ಮಕ್ಕಳು ಸೇರಿದಂತೆ ಎಂಟು ಜನರು ಮೃತಪಟ್ಟಿದ್ದಾರೆ. 


ಸದ್ಯ ಅವಶೇಷಗಳಡಿಯಿಂದ ನಾಲ್ಕು ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಉಳಿದವರ ಪತ್ತೆಗೆ ರಕ್ಷಣಾ ಕಾರ್ಯಾಚರಣೆ ತೀವ್ರಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಾಗಾಲ್ಯಾಂಡ್‌ನ ಮೋನ್ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ಸಂಭವಿಸಿದ ಭೀಕರ ಭೂಕುಸಿತ ಮತ್ತು ಪ್ರವಾಹದಲ್ಲಿ ಎಂಟು ಮಂದಿ ಸಾವನ್ನಪ್ಪಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.ಪ್ರಮುಖ ಸಂಗತಿಗಳು• ಘಟನೆಯ ವಿವರ ಮತ್ತು ಸ್ಥಳನಾಗಾಲ್ಯಾಂಡ್‌ನ ಮೋನ್ ಜಿಲ್ಲೆಯಲ್ಲಿ ಭಾನುವಾರ ಸುರಿದ ಧಾರಾಕಾರ ಮಳೆಯಿಂದಾಗಿ ಭೂಕುಸಿತ ಮತ್ತು ಹಠಾತ್ ಪ್ರವಾಹ ಉಂಟಾಗಿದೆ.• ಪ್ರಾಣಹಾನಿ ಮತ್ತು ನಾಪತ್ತೆಈ ದುರಂತದಲ್ಲಿ ಮಕ್ಕಳು ಸೇರಿದಂತೆ ಎಂಟು ಜನರು ಮೃತಪಟ್ಟಿದ್ದು, ಕೆಲವರು ಇನ್ನೂ ನಾಪತ್ತೆಯಾಗಿದ್ದಾರೆ.• ಆಸ್ತಿಪಾಸ್ತಿ ಹಾನಿಭೂಕುಸಿತದ ತೀವ್ರತೆಗೆ 10ಕ್ಕೂ ಹೆಚ್ಚು ಮನೆಗಳು ಕೊಚ್ಚಿ ಹೋಗಿದ್ದು, ಸ್ಥಳೀಯರಿಗೆ ಭಾರಿ ಹಾನಿಯಾಗಿದೆ.• ರಕ್ಷಣಾ ಕಾರ್ಯಾಚರಣೆಗೆ ಅಡೆತಡೆಅವಶೇಷಗಳ ಅಡಿಯಲ್ಲಿ ಸಿಲುಕಿರುವವರಿಗಾಗಿ ಹುಡುಕಾಟ ನಡೆಯುತ್ತಿದೆಯಾದರೂ, ಪ್ರವಾಹದಂತೆ ಹರಿಯುತ್ತಿರುವ ನೀರಿನಿಂದ ಕಾರ್ಯಾಚರಣೆಗೆ ತೊಡಕಾಗಿದೆ.• ಜಂಟಿ ರಕ್ಷಣಾ ಕಾರ್ಯಾಚರಣೆಸ್ಥಳೀಯರು, ಅಗ್ನಿಶಾಮಕ ದಳ, ಪೊಲೀಸ್, ಸೇನೆ ಮತ್ತು ಎನ್‌ಡಿಆರ್‌ಎಫ್ ತಂಡಗಳು ಜಂಟಿಯಾಗಿ ರಕ್ಷಣಾ ಕಾರ್ಯದಲ್ಲಿ ತೊಡಗಿವೆ.ಪ್ರಮುಖ ಅಂಕಿಅಂಶಗಳು8ಒಟ್ಟು ಸಾವುಗಳು10ಹಾನಿಗೊಳಗಾದ ಮನೆಗಳು4ಪತ್ತೆಯಾದ ಮೃತದೇಹಗಳುಎಐ ಬಳಸಿ ಸಂಸ್ಕರಿಸಲಾಗಿದೆ. ಪಿವಿ ಡಿಜಿಟಲ್ ತಂಡ ಪರಿಶೀಲಿಸಿದೆ

ದುರಂತದಲ್ಲಿ ಎಂಟು ಮಂದಿ ಸಾವನ್ನಪ್ಪಿದ್ದಾರೆ. ಅವಶೇಷಗಳ ಅಡಿಯಿಂದ ಸದ್ಯಕ್ಕೆ ನಾಲ್ಕು ಮೃತದೇಹಗಳನ್ನು ಹೊರತೆಗೆಯಲು ಸಾಧ್ಯವಾಗಿದ್ದು ನಾಪತ್ತೆಯಾದವರಿಗಾಗಿ ಇಡೀ ಪ್ರದೇಶದಲ್ಲಿ ತೀವ್ರ ಹುಡುಕಾಟ ನಡೆಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ವೆನ್ಯೆ ಕೊನ್ಯಾಕ್ ತಿಳಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಭೂಕುಸಿತದ ತೀವ್ರತೆಗೆ 10ಕ್ಕೂ ಹೆಚ್ಚು ಮನೆಗಳು ಕೊಚ್ಚಿ ಹೋಗಿವೆ. ಅವಶೇಷಗಳಡಿ ಯಾರಾದರೂ ಸಿಲುಕಿದ್ದಾರೆಯೇ ಎಂದು ಪತ್ತೆ ಹಚ್ಚಲು ರಕ್ಷಣಾ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ಆದರೆ, ದುರಂತ ಸಂಭವಿಸಿದ ಸ್ಥಳದಲ್ಲಿ ಭಾರಿ ಪ್ರಮಾಣದಲ್ಲಿ ನೀರು ನದಿಯಂತೆ ಹರಿಯುತ್ತಿರುವುದರಿಂದ ರಕ್ಷಣಾ ಕಾರ್ಯಾಚರಣೆಗೆ ತೊಡಕಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಘಟನಾ ಸ್ಥಳದಲ್ಲಿ ಸ್ಥಳೀಯರು, ಸ್ವಯಂಸೇವಕರು, ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು, ಸೇನಾ ಸಿಬ್ಬಂದಿ ಹಾಗೂ ಎನ್‌ಡಿಆರ್‌ಎಫ್‌ ತಂಡಗಳು ಜಂಟಿಯಾಗಿ ರಕ್ಷಣಾ ಕಾರ್ಯದಲ್ಲಿ ತೊಡಗಿವೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಪರಿಸ್ಥಿತಿ ಮೇಲೆ ಸರ್ಕಾರದ ನಿಗಾ: ನಾಗಾಲ್ಯಾಂಡ್ ಸರ್ಕಾರ ಈ ದುರಂತಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದೆ. ರಾಜ್ಯದ ಹಲವು ಭಾಗಗಳಲ್ಲಿ ಸುರಿಯುತ್ತಿರುವ ಮಳೆ ಪರಿಸ್ಥಿತಿಯನ್ನು ಸರ್ಕಾರ ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.










ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries