HEALTH TIPS

ಬುಶೆಹರ್ ಪರಮಾಣು ವಿದ್ಯುತ್ ಸ್ಥಾವರದ ಸಮೀಪ ಅಮೆರಿಕ ದಾಳಿ: ಇರಾನ್ ಆರೋಪ

 ಟೆಹರಾನ್‌: ಬುಶೆಹರ್ ಪರಮಾಣು ವಿದ್ಯುತ್ ಸ್ಥಾವರದ ಬಳಿ ಅಮೆರಿಕ ಗುರುವಾರ ವೈಮಾನಿಕ ದಾಳಿ ನಡೆಸಿದೆ ಎಂದು ಇರಾನ್‌ ಆರೋಪಿಸಿದೆ.


ಈ ಬಗ್ಗೆ ಬುಶೆಹರ್ ಪ್ರಾಂತ್ಯದ ಡೆಪ್ಯೂಟಿ ಗವರ್ನರ್ (deputy governor) ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಪರಮಾಣು ಸ್ಥಾವರದ ಸುತ್ತಮುತ್ತಲಿನ ಪ್ರದೇಶ ಸೇರಿದಂತೆ, ಬುಶೆಹರ್ ಪ್ರಾಂತ್ಯದ ಹಲವಾರು ಸ್ಥಳಗಳು ಅಮೆರಿಕದ ದಾಳಿಗೆ ತುತ್ತಾಗಿವೆ ಎಂದು ಅವರು ತಿಳಿಸಿದ್ದಾರೆ.

ಇರಾನ್‌ನ ಪರಮಾಣು ವಿದ್ಯುತ್ ಸ್ಥಾವರದ ಬಳಿ ಅಮೆರಿಕ ದಾಳಿ ನಡೆಸಿದೆ ಎಂದು ಬುಶೆಹರ್‌ನಲ್ಲಿರುವ ಸ್ಥಳೀಯ ಅಧಿಕಾರಿ ಎಹ್ಸಾನ್ ಜಹಾನಿಯನ್ ಅವರ ಹೇಳಿಕೆಯನ್ನು ಉಲ್ಲೇಖಿಸಿ ಸರ್ಕಾರಿ ಸ್ವಾಮ್ಯದ 'ಐಆರ್‌ಎನ್‌ಎ' ಸುದ್ದಿ ಸಂಸ್ಥೆ ವರದಿ ಮಾಡಿದೆ.

ಇರಾನ್ ಮೇಲಿನ ದಾಳಿಯನ್ನು ಕೊನೆಗೊಳಿಸಿರುವುದಾಗಿ ಅಮೆರಿಕ ಸೇನೆಯ ಸೆಂಟ್ರಲ್ ಕಮಾಂಡ್ ಹೇಳಿದ ಕೆಲವೇ ಗಂಟೆಗಳ ಬಳಿಕ, ಅಂದರೆ ಮಧ್ಯಾಹ್ನದ ವೇಳೆಗೆ ಈ ದಾಳಿ ನಡೆದಿದೆ ಎಂದು ಅವರು ಹೇಳಿದ್ದಾರೆ.

ಈ ಕುರಿತು ಅಮೆರಿಕದ ಸೆಂಟ್ರಲ್ ಕಮಾಂಡ್ ತಕ್ಷಣವೇ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. 



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries