HEALTH TIPS

ಅಂಗಡಿ ವರಾಂಡದಿಂದ ದನಗಳ ಕಳವು-ಮತ್ತೊಬ್ಬ ಆರೋಪಿಯ ಬಂಧನ

ಬದಿಯಡ್ಕ: ಬದಿಯಡ್ಕ ಪೊಲೀಸ್ ಠಾಣೆ ವ್ಯಾಪ್ತಿಯ ಕನ್ಯಪ್ಪಾಡಿಯಲ್ಲಿ ಅಂಗಡಿಯ ಮುಂದೆ ಮಲಗಿದ್ದ ಎರಡು ದನಗಳನ್ನು ಕಳವುಗೈದು ಕಾರಿನಲ್ಲಿ ಸಾಗಿಸಿದ ಪ್ರಕರಣಕ್ಕೆ ಸಂಬಂಧಿಸಿ ಮತ್ತೊಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.  

ಮಂಗಳೂರು ಜೋಕಟ್ಟೆ ನಿವಾಸಿ ಮುಹಮ್ಮದ್ ಅಶ್ರಫ್ (30) ಎಂಬಾತನನ್ನು ಬದಿಯಡ್ಕ ಠಾಣೆ ಪೆÇಲೀಸ್ ಇನ್ಸ್‍ಪೆಕ್ಟರ್ ಆರ್.ಪಿ. ಅನೂಪ್‍ಕೃಷ್ಣನ್ ನೇತೃತ್ವದಪೊಲೀಸರ ತಂಡ  ಬಂಧಿಸಿದೆ. ಪ್ರಕರಣಕ್ಕೆ ಸಂಬಂಧಿಸಿ ಇತರ ಆರೋಪಿಗಳಾದ ಜೋಕಟ್ಟೆಯ ರಾಸಿಕ್ (26) ಹಾಗೂ ಉಳ್ಳಾಲ ಅಳಕೆ ನಿವಾಸಿ ಮುಹಮ್ಮದ್ ಇರ್ಫಾನ್ (25) ಎಂಬಿವರನ್ನು ಜುಲೈ 4ರಂದು ಬಂಧಿಸಲಾಗಿತ್ತು. ಜೂನ್ 16ರಂದು ಮುಂಜಾನೆ 1ಗಂಟೆ ವೇಳೆ ಕನ್ಯಪ್ಪಾಡಿ ರಹ್ಮತ್ ಮಂಜಿಲ್‍ನ ಕೆ.ಎಂ. ಮುಹಮ್ಮದ್ ಎಂಬವರ ಮನೆಯ ಮುಂದೆ ಅಂಗಡಿ ವರಾಂಡದಲ್ಲಿ ಮಲಗಿದ್ದ ದನಗಳನ್ನು ಆರೋಪಿಗಳು ಕಾರಿನಲ್ಲಿ ಹಿಂಸಾತ್ಮಕವಾಗಿ ತುರುಕಿ ಸಾಗಿಸಿದ್ದು, ಸನಿಹದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿರುವ ದೃಶ್ಯಾವಳಿ ಕೇಂದ್ರೀಕರಿಸಿ ನಡೆಸಿದ ತನಿಖೆಯಲ್ಲಿ ಆರೋಪಿಗಳ ಬಗ್ಗೆ ಮಾಹಿತಿ ಲಭ್ಯವಾಗಿತ್ತು. ಈ ನಿಟ್ಟಿನಲ್ಲಿ ಕಾರ್ಯಾಚರಣೆ ನಡೆಸಿದ ಪೆÇಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದರು.

ಕಳವಿಗೀಡಾದ ದನಗಳಿಗೆ ಸುಮಾರು 30,000 ರೂಪಾಯಿ ಮೌಲ್ಯ ಅಂದಾಜಿಸಲಾಗಿದ್ದು, ಈ ದನಗಳನ್ನು ಉಳ್ಳಾಲದ ಕೆ.ಸಿ.ಎಂ.ಎ. ಗ್ರೌಂಡ್‍ನಲ್ಲಿ ಮಾರಾಟ ಮಾಡಿರುವುದಾಗಿ ಪೆÇಲೀಸರು ನಡೆಸಿದ ತನಿಖೆಯಲ್ಲಿ ತಿಳಿದುಬಂದಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries