ಕಾಸರಗೋಡು: ಕನ್ನಡ ಪತ್ರಿಕಾ ದಿನಾಚರಣೆ,ಕನ್ನಡ ಪತ್ರಿಕಾ ಮಾಧ್ಯಮ ಪ್ರಶಸ್ತಿ ಪ್ರದಾನ ಸಮಾರಂಭ, ಗಡಿನಾಡು ಕಾಸರಗೋಡು ಜಿಲ್ಲೆಯಲ್ಲಿ ಕನ್ನಡ ಪತ್ರಿಕೋದ್ಯಮ ನಡೆದು ಬಂದ ದಾರಿ- ವಿಶೇಷೋಪನ್ಯಾಸ, ಕಾಸರಗೋಡು ಜಿಲ್ಲೆಯ ಕನ್ನಡ ಪತ್ರಿಕಾ ವಿತರಕರಿಗೆ ಸನ್ಮಾನ, ಅಭಿನಂದನಾ ಸಮಾರಂಭ ಜುಲೈ 1ರಂದು ಸಂಜೆ 4ಕ್ಕೆ ಕಾಸರಗೋಡು ನುಳ್ಳಿಪ್ಪಾಡಿಯ ಕನ್ನಡಡ ಗಾಮದಲ್ಲಿ ಜರುಗಲಿದೆ.
ಈ ಸಂದರ್ಭ ಕಾಸರಗೋಡು ಜಿಲ್ಲೆಯ ಕನ್ನಡ ಪತ್ರಿಕೆಗಳಿಗೆ ಪತ್ರಿಕಾ ವರದಿ, ಸುದ್ದಿಯನ್ನು ಕಳುಹಿಸುವ ಕುರಿತು ಪತ್ರಿಕಾ ಬರವಣಿಗೆ ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಜತೆಗೆ ನೂತನವಾಗಿ ಆಯ್ಕೆಯಾದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲ್ಯೂಜೆ)ದ ಕಾರ್ಯಕಾರಿ ಸಮಿತಿ ಸದಸ್ಯ ರಾಧಾಕೃಷ್ಣ ಕೆ. ಉಳಿಯತ್ತಡ್ಕ ಅವರಿಗೆ ಅಭಿನಂದನೆ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವಿಶೇಷ ಪ್ರಶಸ್ತಿ ಪುರಸ್ಕೃತ ಛಾಯಾಗ್ರಾಹಕ ಶ್ರೀಕಾಂತ ಕಾಸರಗೋಡು ಅವರಿಗೆ ಅಭಿನಂದನೆ, ಕಾಸರಗೋಡು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಕಟವಾಗುವ ಕನ್ನಡ ದಿನ ಪತ್ರಿಕೆಗಳ ಪ್ರದರ್ಶನ, ಕನ್ನಡ ಪತ್ರಿಕಾ ಪ್ರತಿಜ್ಞಾ ಸ್ವೀಕಾರ ಸಮಾರಂಭ ನಡೆಯುವುದಾಗಿ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ಅಧ್ಯಕ್ಷ ಶಿವರಾಮ ಕಾಸರಗೋಡು ಹೇಳಿಕೆಯಲ್ಲಿ ತಿಳಿಸಿದ್ದಾರೆ.


