HEALTH TIPS

ಭಾರತದ ಚುನಾವಣಾ ವ್ಯವಸ್ಥೆ ವಿಶ್ವದಲ್ಲೇ ಅತ್ಯಂತ ಪಾರದರ್ಶಕ, ವಿಶ್ವಾಸಾರ್ಹ: ಸಿಇಸಿ

 ಮೊರಾದಾಬಾದ್: ಭಾರತದ ಚುನಾವಣಾ ವ್ಯವಸ್ಥೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕ, ನಿಷ್ಪಕ್ಷಪಾತ ಮತ್ತು ವಿಶ್ವಾಸಾರ್ಹ ವ್ಯವಸ್ಥೆಗಳಲ್ಲಿ ಒಂದಾಗಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಗುರುವಾರ ಹೇಳಿದ್ದಾರೆ. ದೋಷರಹಿತ ಮತದಾರರ ಪಟ್ಟಿಗಳ ಆಧಾರದ ಮೇಲೆ ನಡೆಯುವ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗಳು ಬಲಿಷ್ಠ ಪ್ರಜಾಪ್ರಭುತ್ವದ ಅಡಿಪಾಯವಾಗಿವೆ ಎಂದು ಅವರು ಪ್ರತಿಪಾದಿಸಿದ್ದಾರೆ.


ತೀರ್ಥಂಕರ ಮಹಾವೀರ ವಿಶ್ವವಿದ್ಯಾಲಯದಲ್ಲಿ ಏರ್ಪಡಿಸಿದ್ದ ಬೂತ್ ಮಟ್ಟದ ಅಧಿಕಾರಿಗಳು(ಬಿಎಲ್‌ಒ) ಮತ್ತು ಮೇಲ್ವಿಚಾರಕರ ಜೊತೆಗಿನ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮತದಾರರ ಪಟ್ಟಿಯಲ್ಲಿ ನಿಖರತೆ ಕಾಪಾಡುವಲ್ಲಿ ಬಿಎಲ್‌ಒಗಳ ಪಾತ್ರ ಅತ್ಯಂತ ಪ್ರಮುಖವಾಗಿದೆ ಎಂದಿದ್ದಾರೆ.

'ಜಾಗತಿಕವಾಗಿ ಭಾರತದ ಚುನಾವಣಾ ವ್ಯವಸ್ಥೆಯು ಅತ್ಯಂತ ಪಾರದರ್ಶಕ, ತಾರತಮ್ಯರಹಿತ ಮತ್ತು ವಿಶ್ವಾಸಾರ್ಹವಾದುದಾಗಿದೆ' ಎಂದಿದ್ದಾರೆ.

ಮತದಾರರ ಪಟ್ಟಿ ಪರಿಷ್ಕರಣೆ ಕುರಿತಾದ ಮಾರ್ಗಸೂಚಿ, ಚುನಾವಣೆ ಪ್ರಕ್ರಿಯೆ, ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸುವ ಕುರಿತಂತೆಯೂ ಚರ್ಚೆ ನಡೆಸಿದರು.

ಕಾರ್ಯಕ್ರಮದ ಬಳಿಕ ವರದಿಗಾರರ ಜೊತೆ ಮಾತನಾಡಿದ ಅವರು, ಈ ವರ್ಷ ಭಾರತವು 'ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ಮತ್ತು ಚುನಾವಣಾ ನೆರವು ಸಂಸ್ಥೆ'ಯ ಅಧ್ಯಕ್ಷತೆಯನ್ನು ವಹಿಸಿಕೊಳ್ಳಲಿದೆ ಎಂದ ಅವರು, ಇದು ಜಾಗತಿಕ ಮಟ್ಟದಲ್ಲಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳಿಗೆ ಸಿಕ್ಕಿರುವ ಮನ್ನಣೆಯಾಗಿದೆ ಎಂದು ಬಣ್ಣಿಸಿದ್ದಾರೆ.

ಚುನಾವಣಾ ಪ್ರಕ್ರಿಯೆಯ ಮೂರು ಪ್ರಮುಖ ಹಂತಗಳಾದ ಮತದಾರರ ಪಟ್ಟಿ ತಯಾರಿಕೆ, ಮತದಾನ ಮತ್ತು ಮತಗಳ ಎಣಿಕೆಯನ್ನು ಪಾರದರ್ಶಕ ವ್ಯವಸ್ಥೆಯಡಿ ನಡೆಸಲಾಗುತ್ತಿದೆ ಎಂದು ಕುಮಾರ್ ತಿಳಿಸಿದರು.

ರಾಜಕೀಯ ಪಕ್ಷಗಳು ಮತ್ತು ಸ್ಪರ್ಧಿಸುವ ಅಭ್ಯರ್ಥಿಗಳು ಈ ಪ್ರಕ್ರಿಯೆಗಳನ್ನು ನಿರಂತರವಾಗಿ ಪರಿಶೀಲಿಸುತ್ತಿರುತ್ತಾರೆ. ಇದು ಭಾರತದ ಚುನಾವಣಾ ನಿರ್ವಹಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಹಾಗೂ ಪಾರದರ್ಶಕತೆಗೆ ಕೊಡುಗೆ ನೀಡುತ್ತದೆ ಎಂದು ಅವರು ಹೇಳಿದ್ದಾರೆ.









ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries