HEALTH TIPS

ಕುಳೂರು ಶಾಲೆಯಲ್ಲಿ ರಕ್ಷಕ-ಶಿಕ್ಷಕ ಸಂಘದ ಮಹಾಸಭೆ

ಮಂಜೇಶ್ವರ: ಕುಳೂರಿನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 2026-27 ನೇ ಶೈಕ್ಷಣಿಕ ವರ್ಷದ ಶಾಲಾ ವ್ಯವಸ್ಥಾಪನಾ ಸಮಿತಿ (ರಕ್ಷಕ-ಶಿಕ್ಷಕ ಸಂಘ) ಯ ಮಹಾಸಭೆ ಇತ್ತೀಚೆಗೆ ನಡೆಯಿತು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಜಯರಾಜ್ ಶೆಟ್ಟಿ ಚಾರ್ಲರವರು ವಹಿಸಿದ್ದರು. ಶಾಲಾ ಮುಖ್ಯ ಶಿಕ್ಷಕಿ ಮಾಲತಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಲಾ ಚಟುವಟಿಕೆಗಳ ಬಗ್ಗೆ ಚರ್ಚೆ ನಡೆಸಲಾಯಿತು.

ಇದೇ ಸಂದರ್ಭದಲ್ಲಿ ಪಿ.ಟಿ.ಎ. ಉಪಾಧ್ಯಕ್ಷರಾದ ಸತೀಶ್ ಎಲಿಯಾಣರವರು ಶಾಲೆಗೆ ಒಂದು ಸೀಲಿಂಗ್ ಫ್ಯಾನ್ ಕೊಡುಗೆಯಾಗಿ ನೀಡಿದರು. ಅವರಿಗೆ ಶಾಲಾ ಪರವಾಗಿ ಧನ್ಯವಾದವನ್ನು ಅರ್ಪಿಸಲಾಯಿತು.

ಬಳಿಕ ರಕ್ಷಕ-ಶಿಕ್ಷಕ ಸಂಘದ ನೂತನ ಸಮಿತಿಯನ್ನು ರಚಿಸಲಾಯಿತು. ಅಧ್ಯಕ್ಷರಾಗಿ ಜಯರಾಜ್ ಶೆಟ್ಟಿ ಚಾರ್ಲರವರು ಮತ್ತು ಉಪಾಧ್ಯಕ್ಷರಾಗಿ ಸತೀಶ್ ಎಲಿಯಾಣ ಅವಿರೋಧವಾಗಿ ಪುನರಾಯ್ಕೆಯಾದರು. ಮಾತೃ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾಗಿ ಶ್ವೇತ ಕೇಮಜಲ್, ಉಪಾಧ್ಯಕ್ಷರಾಗಿ ಪ್ರಿಯಾಂಕ ಕೇಮಜಲ್ ಹಾಗೂ ಪ್ರೀ ಪ್ರೈಮರಿ ವಿಭಾಗದ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾಗಿ ಕವಿತಾ ದೇರಂಬಳ ಅವಿರೋಧವಾಗಿ ಆಯ್ಕೆಯಾದರು.

ಕಾರ್ಯಕಾರಿ ಸಮಿತಿ ಸದಸ್ಯರಾಗಿ ವಿಶ್ವನಾಥ ಸುಣ್ಣಾರ, ಸಾಯಿನಾಥ್ ಮಾನೂರು, ಪ್ರತಿಭಾ ಕುಳಬೈಲು, ಅಂಬಿಕ ಚಿನಾಲ, ಸುಚರಿತ ಚಿನಾಲ, ಶ್ರೀಲತ ಬಟ್ಟಿಪದವು, ಜೈನಬ ಕುಳೂರು, ಸುಮಿತ್ರ ಚಿನಾಲ, ಆರತಿ ಪೊಯ್ಯೇಲು, ಜ್ಯೋತಿಶ್ರೀ ಚಿನಾಲ, ಹರಿಣಾಕ್ಷಿ ಕೇಮಜಲ್, ಶಾರದ ಕುಳೂರು ಹಾಗೂ ಸವಿತ ಕುಳೂರು ಆಯ್ಜೆಯಾದರು.

ಶಾಲಾ ಶಿಕ್ಷಕಿ ಸೌಮ್ಯ ಪಿ ಸ್ವಾಗತಿಸಿ, ಶಿಕ್ಷಕಿ ನಯನ ಎಂ ವಂದಿಸಿದರು. ಶಿಕ್ಷಕ ಜಯಪ್ರಶಾಂತ್ ಪಾಲೆಂಗ್ರಿ ಕಾರ್ಯಕ್ರಮ ನಿರೂಪಿಸಿದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries