ಬದಿಯಡ್ಕ: ಬಿಜೆಪಿ ಕುಂಬ್ಡಾಜೆ ಪಂಚಾಯಿತಿ ಸಮಿತಿಯ ನೇತೃತ್ವದಲ್ಲಿ ಸಾಮಾಜಿಕ ಕಾರ್ಯಕರ್ತ, ಪಕ್ಷದ ಪ್ರಮುಖರಾದ ಅಶೋಕ್ ಭಟ್ ಅವರ ನಿಧನಕ್ಕೆ ಸರ್ವಪಕ್ಷ ಸಂತಾಪ ಸೂಚಕ ಸಭೆ ಮಾರ್ಪನಡ್ಕ ಪೇಟೆಯಲ್ಲಿ ನಡೆಯಿತು. ಪಂಚಾಯಿತಿ ಸಮಿತಿ ಅಧ್ಯಕ್ಷ ಶಶಿಧರ ತೆಕ್ಕೆಮೂಲೆ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಯಶೋದಾ ಎನ್., ಬಿಜೆಪಿ ಕೋಝಿಕ್ಕೋಡ್ ವಲಯ ಪ್ರಧಾನ ಕಾರ್ಯದರ್ಶಿ ಸುಧಾಮ ಗೋಸಾಡ, ರಾಜ್ಯ ಸಮಿತಿ ಸದಸ್ಯ ಹರೀಶ್ ನಾರಂಪಾಡಿ, ಮಂಡಲ ಅಧ್ಯಕ್ಷ ಗೋಪಾಲಕೃಷ್ಣ ಮುಂಡೋಳುಮೂಲೆ, ಕುಂಬ್ಡಾಜೆ ಗ್ರಾಮಪಂಚಾಯಿತಿ ಉಪಾಧ್ಯಕ್ಷ ಹಾಗೂ ಮಂಡಲ ಪ್ರಧಾನ ಕಾರ್ಯದರ್ಶಿ ರವೀಂದ್ರ ರೈ ಗೋಸಾಡ, ಸಿಪಿಎಂ ಮುಖಂಡ ನಾರಾಯಣ ನಂಬ್ಯಾರ್, ಮುಸ್ಲಿಂಲೀಗ್ ಮುಖಂಡ ಎಸ್. ಮಹಮ್ಮದ್, ಕಾಂಗ್ರೆಸ್ ಮುಖಂಡ ಜೋನಿ ಕ್ರಾಸ್ತ, ಬಿಜೆಪಿ ಪಂಚಾಯಿತಿ ಪ್ರಧಾನ ಕಾರ್ಯದರ್ಶಿ ಪ್ರಮೋದ್ ಭಂಡಾರಿ, ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ ರಮೇಶ್ ಪದ್ಮಾರ್, ವ್ಯಾಪಾರಿ ವ್ಯವಸಾಯಿ ಏಕೋಪನಾ ಸಮಿತಿಯ ಸದಸ್ಯ ಗೋಪಾಲ ಮಣಿಯಾಣಿ, ಜನಪ್ರತಿನಿಧಿಗಳು, ವಿವಿಧ ಪಕ್ಷಗಳ ಕಾರ್ಯಕರ್ತರು ಹಾಗೂ ಊರಿನ ಪ್ರಮುಖರು ಉಪಸ್ಥಿತರಿದ್ದು ನುಡಿನಮನ ಸಲ್ಲಿಸಿದರು.

.jpg)
