HEALTH TIPS

ಸಂಸತ್ತಿನ ಆವರಣದಲ್ಲಿ ಕಪ್ಪು ಬಟ್ಟೆ ಧರಿಸಿ ವಿರೋಧ ಪಕ್ಷಗಳ ಪ್ರತಿಭಟನೆ

ನವದೆಹಲಿ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ ಪ್ರತಿಭಟನೆ ಮಾಡುತ್ತಿರುವವರಿಗೆ ಬೆಂಬಲ ವ್ಯಕ್ತಪಡಿಸಿ ವಿರೋಧ ಪಕ್ಷಗಳ ನಾಯಕರು ಕಪ್ಪು ಬಟ್ಟೆ ಧರಿಸಿ ಸಂಸತ್ತಿನ ಆವರಣದಲ್ಲಿ ಬುಧವಾರ(ಜುಲೈ 22) ಪ್ರತಿಭಟನೆ ನಡೆಸಿದ್ದಾರೆ. 


ಇದೇ ವೇಳೆ, ವಿರೋಧ ಪಕ್ಷಗಳ ಸಂಸದರು ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ದಾರೆ. ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ ಖಂಡಿಸಿ, ಗೃಹ ಸಚಿವ ಅಮಿತ್ ಶಾ ಮತ್ತು ಶಿಕ್ಷಣ ಸಚಿವ ಧರ್ಮೇಂದ್ರ ಪ್ರದಾನ್ ಅವರ ರಾಜೀನಾಮೆಗೆ ಆಗ್ರಹಿಸಿದ್ದಾರೆ.

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಕೂಡ ವಿರೋಧ ಪಕ್ಷಗಳ ಸಂಸದರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಕಾಂಗ್ರೆಸ್, ಸಮಾಜವಾದಿ, ಎಡ ಪಕ್ಷಗಳು, ಆರ್‌ಜೆಡಿ, ಟಿಎಂಸಿ ಮತ್ತು ಜೆಎಂಎಂ ಸೇರಿದಂತೆ ವಿರೋಧ ಪಕ್ಷದ ಹಲವು ಸಂಸದರು ಕಪ್ಪು ಬಟ್ಟೆ ಧರಿಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ಇದಕ್ಕೂ ಮುನ್ನ, ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ್ ಖರ್ಗೆ ಅವರ ಕೊಠಡಿಯಲ್ಲಿ ಇಂಡಿಯಾ ಮೈತ್ರಿಕೂಟದ ನಾಯಕರು ಕಾರ್ಯತಂತ್ರದ ಸಭೆ ನಡೆಸಿದ್ದರು. ಅದರಲ್ಲಿ ರಾಹುಲ್ ಗಾಂಧಿ ಸೇರಿದಂತೆ ವಿರೋಧ ಪಕ್ಷಗಳ ಹಲವು ನಾಯಕರು ಉಪಸ್ಥಿತರಿದ್ದರು. 






ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries