HEALTH TIPS

ಬಿಜೆಪಿ ಬದಿಯಡ್ಕ ಪಂಚಾಯತಿ ಪೂರ್ವ ವಲಯ ಸಭೆ

ಬದಿಯಡ್ಕ: ಬಿಜೆಪಿ ಬದಿಯಡ್ಕ ಪಂಚಾಯತಿ ಸಮಿತಿ ಪೂರ್ವ ವಲಯ ಸಭೆ ಭಾನುವಾರ ಬದಿಯಡ್ಕ ಸಂಸ್ಕøತಿ ಭವನದಲ್ಲಿ ಜರಗಿತು. ಮಂಡಲ ಅಧ್ಯಕ್ಷ ಗೋಪಾಲಕೃಷ್ಣ ಮುಂಡೋಳುಮೂಲೆ ಉದ್ಘಾಟಿಸಿ ಮಾತನಾಡಿ, ಕೇಂದ್ರ ಸರ್ಕಾರವು ಜನಸಾಮಾನ್ಯರಿಗಾಗಿ ಜಾರಿಗೊಳಿಸಿದ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ಕಾರ್ಯಕರ್ತರು ಜನಪ್ರತಿನಿಧಿಗಳೊಂದಿಗೆ ಜೊತೆಗೂಡಬೇಕು. ಪಕ್ಷವನ್ನು ತಳಮಟ್ಟದಿಂದಲೇ ಕಟ್ಟಿಬೆಳೆಸುವಲ್ಲಿ ಪ್ರತಿಯೊಬ್ಬ ಕಾರ್ಯಕರ್ತನೂ ಶಕ್ತಿಮೀರಿ ಪ್ರಯತ್ನಿಸಬೇಕು ಎಂದರು. 


ಬಿಜೆಪಿ ಬದಿಯಡ್ಕ ಪೂರ್ವ ವಲಯ ಅಧ್ಯಕ್ಷ ಬಿ. ಉದನೇಶ್ವರ ಬದಿಯಡ್ಕ ಅಧ್ಯಕ್ಷತೆ ವಹಿಸಿದರು. ಈ ಸಂದರ್ಭದಲ್ಲಿ ನೂತನ ಸಮಿತಿಯನ್ನು ಘೋಷಿಸಲಾಯಿತು. ಅಧ್ಯಕ್ಷರಾಗಿ ಉದನೇಶ್ವರ ಬಿ, ಪ್ರಧಾನ ಕಾರ್ಯದರ್ಶಿಯಾಗಿ ಶರತ್ ಕುಮಾರ್ ಶೆಟ್ಟಿ, ಉಪಾಧ್ಯಕ್ಷರಾಗಿ ಗಂಗಾಧರ ಪಳ್ಳತ್ತಡ್ಕ, ಜಯಂತಿ ಚೆಟ್ಟಿಯಾರ್ ಕಾರ್ಯದರ್ಶಿಗಳಾಗಿ ಸುನೀಲ್ ಉಕ್ಕಿನಡ್ಕ, ದೀಕ್ಷಿತ್ ಬದಿಯಡ್ಕ ಹಾಗೂ ಹದಿನಾರು ಮಂದಿ ಸದಸ್ಯರನ್ನು ಆಯ್ಕೆಮಾಡಲಾಯಿತು. ಮಂಡಲ ಪ್ರಧಾನ ಕಾರ್ಯದರ್ಶಿ ರವೀಂದ್ರ ರೈ ಗೋಸಾಡ ನೂತನ ಸಮಿತಿಗೆ ಶುಭಹಾರೈಸಿ ಮಾತನಾಡಿದರು. ಬಿಜೆಪಿ ಜಿಲ್ಲಾ ಉಪಾಧ್ಯಕ್ಷ, ಬದಿಯಡ್ಕ ಗ್ರಾಮ ಪಂಚಾಯಿತಿ ಅಧ್ಯಕ್ಷ ಶಂಕರ ಡಿ, ಬಿಜೆಪಿ ಜಿಲ್ಲಾ ಕಾರ್ಯದರ್ಶಿ, ಬದಿಯಡ್ಕ ಗ್ರಾಮಪಂಚಾಯಿತಿ ಉಪಾಧ್ಯಕ್ಷೆ ಅಶ್ವಿನಿ ಕೆ.ಎಂ., ಮಂಡಲ ಕಾರ್ಯದರ್ಶಿ, ಗ್ರಾಮಪಂಚಾಯಿತಿ ಸದಸ್ಯ ಅವಿನಾಶ್ ರೈ, ಹಿರಿಯರಾದ ಜಯರಾಮ ಚೆಟ್ಟಿಯಾರ್, ವಕೀಲ ಗಣೇಶ್ ಬಿ., ವಿಜಯನ್ ಎಂ.ವಿ ಶುಭಹಾರೈಸಿಸಿದರು. ಆನಂದ ಕೆ ಸ್ವಾಗತಿಸಿ, ಶರತ್ ಕುಮಾರ್ ಶೆಟ್ಟಿ ವಂದಿಸಿದರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries