HEALTH TIPS

ಸಾಮಾಜಿಕ ಮಾಧ್ಯಮಗಳು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯದ ವಿಷಯಗಳಿಗೆ ಸಂಬಂಧಿಸಿದ ಎಸ್‌ಒಪಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು: ಕೇಂದ್ರ ಸರ್ಕಾರ

 ನವದೆಹಲಿ:: ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯದ ವಿಷಯಗಳಿಗೆ (ಸಿಎಸ್‌ಎಎಂ ) ಸಂಬಂಧಿಸಿದಂತೆ ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ಗಳು ನಿಗದಿತ ಪ್ರಮಾಣಿತ ಕಾರ್ಯವಿಧಾನ(ಎಸ್‌ಒಪಿ) ಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಇನ್ಸ್ಟಾಗ್ರಾಮ್ನಲ್ಲಿ ಮಕ್ಕಳ ಲೈಂಗಿಕ ದೌರ್ಜನ್ಯದ ವಿಷಯಗಳಿಗೆ ಪ್ರವೇಶವನ್ನು ಉತ್ತೇಜಿಸುವ ಅಥವಾ ಸುಲಭಗೊಳಿಸುವ ಜಾಹೀರಾತುಗಳ ಕುರಿತಾದ ನೋಟಿಸ್ಗೆ ಮೆಟಾ ನೀಡಿರುವ ಪ್ರತಿಕ್ರಿಯೆಯನ್ನು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು ಪರಿಶೀಲಿಸುತ್ತಿರುವ ಬೆನ್ನಲ್ಲೇ ಸರ್ಕಾರದ ಈ ಹೇಳಿಕೆ ಹೊರಬಿದ್ದಿದೆ. 


ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯದ ವಿಷಯಗಳನ್ನು ಸಮಯಕ್ಕೆ ಸರಿಯಾಗಿ ವರದಿ ಮಾಡುವುದು, ಕಾನೂನು ಜಾರಿ ಸಂಸ್ಥೆಗಳೊಂದಿಗೆ ಸಮನ್ವಯ ಸಾಧಿಸುವುದು ಮತ್ತು ಇಂಡಿಯನ್ ಸೈಬರ್ ಕ್ರೈಮ್ ಕೋಆರ್ಡಿನೇಷನ್ ಸೆಂಟರ್ ನಂತಹ ನಿಯೋಜಿತ ಸಂಸ್ಥೆಗಳ ಮೂಲಕ ಕೆಲಸ ಮಾಡುವುದು ಸೇರಿದಂತೆ ಎಲ್ಲಾ ಅಗತ್ಯ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಸರ್ಕಾರ ತಿಳಿಸಿದೆ.

ಭಾರತದಲ್ಲಿ ಕಾರ್ಯನಿರ್ವಹಿಸುತ್ತಿರುವ ಮಾಧ್ಯಮ ಪ್ಲಾಟ್ಫಾರ್ಮ್ಗಳಿಗೆ ಈ ಕಾರ್ಯವಿಧಾನಗಳ ಪಾಲನೆ ಪ್ರಮುಖ ಜವಾಬ್ದಾರಿಯಾಗಿದೆ. ಯಾವುದೇ ಲೋಪದೋಷಗಳು ಕಂಡುಬಂದಲ್ಲಿ ಅನ್ವಯವಾಗುವ ಕಾನೂನು ಚೌಕಟ್ಟಿನಡಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿರುವುದಾಗಿ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಇನ್ಸ್ಟಾಗ್ರಾಮ್ನಲ್ಲಿ ಇಂತಹ ಜಾಹೀರಾತುಗಳು ಕಾಣಿಸಿಕೊಂಡಿರುವ ವರದಿಗಳ ನಂತರ, ಮೆಟಾದ ಜಾಹೀರಾತು ಪರಿಶೀಲನಾ ವ್ಯವಸ್ಥೆಗಳು, ಕಂಟೆಂಟ್ ಮಾಡರೇಶನ್ ಪ್ರಕ್ರಿಯೆಗಳು ಮತ್ತು ಸುರಕ್ಷತಾ ಕ್ರಮಗಳ ಬಗ್ಗೆ ವಿವರಣೆ ಕೋರಿ ಕೇಂದ್ರ ಸರ್ಕಾರವು ನೋಟಿಸ್ ಜಾರಿ ಮಾಡಿತ್ತು.

ಈ ಬಗ್ಗೆ ಪ್ರತಿಕ್ರಿಯಿಸಿದ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಕಾರ್ಯದರ್ಶಿ ಎಸ್. ಕೃಷ್ಣನ್̧ ಮೆಟಾ ಸಂಸ್ಥೆಯಿಂದ ಪ್ರತಿಕ್ರಿಯೆ ಬಂದಿದ್ದು, ಅದನ್ನು ಮೌಲ್ಯಮಾಪನ ಮಾಡಿದ ನಂತರ ಮುಂದಿನ ಕ್ರಮವನ್ನು ನಿರ್ಧರಿಸಲಾಗುವುದು. ಇಂತಹ ವಿಷಯಗಳನ್ನು ಪತ್ತೆಹಚ್ಚುವಲ್ಲಿ, ವರದಿ ಮಾಡುವಲ್ಲಿ ಮತ್ತು ಅವುಗಳ ವಿರುದ್ಧ ಕ್ರಮ ಕೈಗೊಳ್ಳುವಲ್ಲಿ ಮೆಟಾ ತನ್ನ ಜವಾಬ್ದಾರಿಗಳನ್ನು ಸರಿಯಾಗಿ ಪಾಲಿಸಿದೆಯೇ ಎಂಬುವುದರ ಮೇಲೆಯೇ ಮುಖ್ಯವಾಗಿ ಗಮನಹರಿಸಲಾಗಿದೆ ಎಂದು ತಿಳಿಸಿದ್ದಾರೆ. 







ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries