HEALTH TIPS

ಪ್ರಧಾನಿ ನಿವಾಸದ ಮುಂದೆ ರಾಹುಲ್ ನೇತೃತ್ವದಲ್ಲಿ ಕಾಂಗ್ರೆಸ್ ಉಗ್ರ ಪ್ರತಿಭಟನೆ; ಮೋದಿ, ಅಮಿತ್‌ ಶಾ, ಪ್ರಧಾನ್‌ ರಾಜೀನಾಮೆಗೆ ಪಟ್ಟು

ನವದೆಹಲಿ: ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ​ ಪಾರ್ಟಿ ಸೋಮವಾರ ನಡೆಸಿದ "ಸಂಸತ್ ಚಲೋ" ವೇಳೆ ವಿದ್ಯಾರ್ಥಿಗಳ ಮೇಲೆ ಪೊಲೀಸ್ ಬಲ ಪ್ರಯೋಗ ಖಂಡಿಸಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸದ ಮುಂದ ಧರಣಿ ನಡೆಸುತ್ತಿದೆ.


ದೆಹಲಿಯ ಲೋಕ ಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಿಅಧಿಕೃತ ನಿವಾಸದ ಎದುರು ನೆಲದ ಮೇಲೆ ಕುಳಿತು ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸುತ್ತಿದ್ದು, ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಈ ಪ್ರತಿಭಟನೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಯನಾಡ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ, ಕರ್ನಾಟಕ ಸಿಎಂ ಡಿಕೆ ಶಿವಕುಮಾರ್‌, ಮಾಜಿ ಸಿಎಂ ಸಿದ್ದರಾಮಯ್ಯ, ಮಾಜಿ ಸಚಿವ ಕೆ.ಹೆಚ್ ಮುನಿಯಪ್ಪ ಸೇರಿದಂತೆ ಕಾಂಗ್ರೆಸ್‌ನ ಇತರ ನಾಯಕರು ಭಾಗವಹಿಸಿದ್ದರು.

ಪ್ರಧಾನಿ ವಿರುದ್ಧ ಘೋಷಣೆಗಳನ್ನು ಕೂಗಿದ ಪಕ್ಷದ ಹಲವಾರು ಸಂಸದರು ಮತ್ತು ನಾಯಕರು, "ನಿನ್ನೆ ಯುವ ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯವನ್ನು ಖಂಡಿಸಿದರು. ಇದಕ್ಕೆ ಪ್ರಧಾನಿ ಮೋದಿ ಉತ್ತರ ನೀಡಬೇಕು ಎಂದು ಆಗ್ರಹಿಸಿದರು.

"ಭಾರತದ ಯುವಕರ ಭವಿಷ್ಯವನ್ನು ನಾಶಪಡಿಸಿದ್ದಕ್ಕಾಗಿ ಪ್ರಧಾನಿ ಮತ್ತು ಗೃಹ ಸಚಿವರು ರಾಜೀನಾಮೆ ನೀಡಬೇಕು" ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ಹೇಳಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ರಾಹುಲ್ ಗಾಂಧಿ, ʻನಿನ್ನೆ ಯುವ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸರ ಕ್ರೂರ ವರ್ತನೆ, ದೌರ್ಜನ್ಯಕ್ಕೆ ಪ್ರಧಾನಿ ಮೋದಿ ಅವರಿಂದ ಉತ್ತರ ಕೇಳಲು ನಾವಿಲ್ಲಿಗೆ ಬಂದಿದ್ದೇವೆ. ದೇಶದ ಯುವಜನರ ಭವಿಷ್ಯ ಹಾಳು ಮಾಡಿದ ಕಾರಣ ಪ್ರಧಾನಿ ಹಾಗೂ ಗೃಹ ಸಚಿವರು ರಾಜೀನಾಮೆ ನೀಡಬೇಕುʼ ಎಂದು ಆಗ್ರಹಿಸಿದ್ದಾರೆ.

ಇನ್ನೂ ಪ್ರಧಾನಿಯ ನಿವಾಸವು ಭದ್ರತಾ ವಲಯವಾಗಿರುವ ಹಿನ್ನೆಲೆಯಲ್ಲಿ ಧರಣಿ ಅಂತ್ಯಗೊಳಿಸುವಂತೆ ಪೊಲೀಸರು, ಕಾಂಗ್ರೆಸ್ ನಾಯಕರಿಗೆ ಮನವಿ ಮಾಡಿದರು. ಆದರೆ ಪೊಲೀಸರ ಮನವಿಗೆ ಒಪ್ಪದ ಹಿನ್ನೆಲೆಯಲ್ಲಿ ರಾಹುಲ್‌ ಗಾಂಧಿ ಸೇರಿದಂತೆ ಕೆಲ ಕಾಂಗ್ರೆಸ್‌ ನಾಯಕರನ್ನು ಪೊಲೀಸರು ವಶಕ್ಕೆ ಪಡೆದರು.







ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries