ಕಾಸರಗೋಡು: ವಿಶ್ವ ಯುವ ಕೌಶಲ್ಯ ದಿನಾಚರಣೆ ಅಂಗವಾಗಿ ಕಾಸರಗೋಡು ಸರ್ಕಾರಿ ಕಾಲೇಜು ಎನ್‍ಸಿಸಿ ಘಟಕದ ವತಿಯಿಂದ 'ಬಿಲ್ಡ್ ಯುವರ್ ಟುಮಾರೋ' ಎಂಬ ವಿಷಯದ ಕುರಿತು ಕೌಶಲ್ಯ ಅಭಿವೃದ್ಧಿ ಕಾರ್ಯಾಗಾರ ಕಾಲೇಜು ಸಭಾಂಗಣದಲ್ಲಿ ಜರುಗಿತು.
ಕಾಲೇಜು ಘಟಕ ಎನ್‍ಸಿಸಿ ಅಧಿಕಾರಿ ಲೆಫ್ಟಿನೆಂಟ್ ಲಕ್ಷ್ಮಿ ಕೆ. ಸಮಾರಂಭ ಉದ್ಘಾಟಿಸಿ ಮಾತನಾಡಿ, ಬದಲಾಗುತ್ತಿರುವ ಜಗತ್ತಿನ ಬೇಡಿಕೆಗಳಿಗೆ ಅನುಗುಣವಾಗಿ ಯುವಜನತೆ ಕೌಶಲ್ಯ ಬೆಳೆಸಿಕೊಳ್ಳುವುದು ಅನಿವಾರ್ಯ. ನಿರಂತರ ಕಲಿಕೆ, ಆತ್ಮಾವಲೋಕನ ಮತ್ತು ಸ್ವಯಂ ಸುಧಾರಣೆಯು ವೈಯಕ್ತಿಕ ಹಾಗೂ ವೃತ್ತಿಪರ ಯಶಸ್ಸಿಗೆ ಹೆಚ್ಚು ಪ್ರಯೋಜನಕಾರಿ ಎಂದು ತಿಳಿಸಿದರು.
ವಿದ್ಯಾರ್ಥಿಗಳಲ್ಲಿ ತಮ್ಮ ಸುಪ್ತ ಸಾಮಥ್ರ್ಯವನ್ನು ಗುರುತಿಸಲು, ಕೌಶಲ್ಯ ಬಲಪಡಿಸಿಕೊಳ್ಳಲು ಮತ್ತು ಭವಿಷ್ಯದ ಅವಕಾಶಗಳನ್ನು ಆತ್ಮವಿಶ್ವಾಸದಿಂದ ಎದುರಿಸಲು ಪ್ರೇರಣೆ ನೀಡುವ ನಿಟ್ಟಿನಲ್ಲಿ ಕರ್ಯಕ್ರಮ ಯೋಜಿಸಲಾಘಿತ್ತು. ಕಾರ್ಯಕ್ರಮದಲ್ಲಿ ಕಾಲೇಜಿನ ಎನ್‍ಸಿಸಿ ಕೆಡೆಟ್‍ಗಳು ಭಾಗವಹಿಸಿದ್ದರು.

