HEALTH TIPS

ಖಮೇನಿ ಅಂತ್ಯಕ್ರಿಯೆ ಇಂದು: ಇರಾನ್ ಮೇಲೆ ಪ್ರಬಲ ದಾಳಿ ನಡೆಸಲಿದ್ದೇವೆ ಎಂದ ಟ್ರಂಪ್

 ವಾಷಿಂಗ್ಟನ್: ಇರಾನ್‌ ಪರಮೋಚ್ಚ ನಾಯಕರಾಗಿದ್ದ ಆಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆ ವಿಧಿಗಳು ಜುಲೈ 9ರಂದು (ಗುರುವಾರ) ಪೂರ್ಣಗೊಳ್ಳಲಿವೆ. ಇದರ ಬೆನ್ನಲ್ಲೇ, ಇಂದು ರಾತ್ರಿ (ಬುಧವಾರ) ಇರಾನ್ ಮೇಲೆ ಮತ್ತಷ್ಟು ಪ್ರಬಲ ದಾಳಿಗಳನ್ನು ನಡೆಸಲಿದ್ದೇವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಕೆ ನೀಡಿದ್ದಾರೆ.


ಟರ್ಕಿಯಲ್ಲಿ ನಡೆಯುತ್ತಿರುವ ನ್ಯಾಟೊ ಶೃಂಗಸಭೆಯಲ್ಲಿ ಉಕ್ರೇನ್‌ ಅಧ್ಯಕ್ಷ ವೊಲೊಡಿಮಿರ್‌ ಝೆಲೆನ್‌ಸ್ಕಿ ಅವರೊಂದಿಗಿನ ಭೇಟಿಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ್ದಾರೆ.

'ನಾನು ಸಣ್ಣದೊಂದು ಎಚ್ಚರಿಕೆ ನೀಡುತ್ತಿದ್ದೇನೆ. ನಾವು ಇಂದು ರಾತ್ರಿ ಇರಾನಿಯನ್ನರ ಮೇಲೆ ಪ್ರಬಲ ದಾಳಿ ಮಾಡಲಿದ್ದೇವೆ' ಎಂದು ಹೇಳಿದ್ದಾರೆ.

ಹೊರ್ಮುಜ್ ಜಲಸಂಧಿಯಲ್ಲಿ ಮೂರು ತೈಲ ಟ್ಯಾಂಕರ್‌ಗಳ ಮೇಲೆ ಕ್ಷಿಪಣಿ ದಾಳಿ ನಡೆದ ನಂತರ ಅಮೆರಿಕ ಇರಾನ್‌ಗೆ ತೈಲ ಮಾರಾಟ ಮಾಡಲು ನೀಡಿದ್ದ ಪರವಾನಗಿಯನ್ನು ರದ್ದುಗೊಳಿಸಿದ್ದು, ತನ್ನೆಲ್ಲಾ ವಹಿವಾಟುಗಳನ್ನು ಮುಕ್ತಾಯಗೊಳಿಸಲು ಜುಲೈ 17ರವರೆಗೆ ಗಡುವು ನೀಡಿದೆ.

ಹೊರ್ಮುಜ್ ಜಲಸಂಧಿಯ ಮೂಲಕ ಹಾದುಹೋಗುತ್ತಿದ್ದ ಮೂರು ವಾಣಿಜ್ಯ ಹಡಗುಗಳ ಮೇಲೆ ಇರಾನ್ ನಡೆಸಿದ ದಾಳಿಗೆ ಪ್ರತಿಯಾಗಿ ಅಮೆರಿಕವು ಹೊಸ ವೈಮಾನಿಕ ದಾಳಿಗಳನ್ನು ನಡೆಸಿದೆ ಎಂದು ಅಮೆರಿಕ ಸೆಂಟ್ರಲ್ ಕಮಾಂಡ್ ತಿಳಿಸಿದೆ. ಇದರ ಬೆನ್ನಲ್ಲೇ, ನಾವು ಬಹರೇನ್‌ ಮತ್ತು ಕುವೈತ್‌ನಲ್ಲಿರುವ ಅಮೆರಿಕದ ಸೇನಾ ನೆಲೆಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದೇವೆ ಎಂದು ಇರಾನ್‌ನ ರೆವಲ್ಯೂಷನರಿ ಗಾರ್ಡ್ಸ್ ಹೇಳಿದೆ. 








ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries