ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಕಚೇರಿಯಲ್ಲಿ ಸಚಿವರ ಜೊತೆ ಉನ್ನತ ಮಟ್ಟದ ಸಭೆ ನಡೆಸಿದರು.
ಸಭೆಯಲ್ಲಿ ಮೋದಿ ಅವರು ಅಧ್ಯಕ್ಷತೆ ವಹಿಸಿದ್ದರು. ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ವಿದೇಶಾಂಗ ಸಚಿವ ಎಸ್. ಜೈಶಂಕರ್, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾಗವಹಿಸಿದ್ದರು.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಕೇಂದ್ರ ಸಚಿವ ಪೀಯೂಷ್ ಗೋಯಲ್, ಹರ್ದೀಪ್ ಸಿಂಗ್ ಪುರಿ, ಕೇಂದ್ರ ಬಂದರು ಸಚಿವ ಸರ್ಬಾನಂದ ಸೋನೊವಾಲ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ಪ್ರಧಾನ ಕಾರ್ಯದರ್ಶಿ ಪಿ.ಕೆ. ಮಿಶ್ರಾ ಅವರು ಉಪಸ್ಥಿತರಿದ್ದರು.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

