ಬದಿಯಡ್ಕ: ರಸ್ತೆಬದಿಯಲ್ಲಿ ತ್ಯಾಜ್ಯಗಳನ್ನು ಎಸೆಯುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಸಲುವಾಗಿ ಬದಿಯಡ್ಕ ಗ್ರಾಮ ಪಂಚಾಯಿತಿಯ ಸೂಕ್ಷ್ಮ ಪ್ರದೇಶಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸಲಾಯಿತು. ರಸ್ತೆ ಬದಿಗಳಲ್ಲಿ ಅನಧಿಕೃತವಾಗಿ ನಡೆಯುತ್ತಿರುವ ತ್ಯಾಜ್ಯ ವಿಲೇವಾರಿಯನ್ನು ತಡೆಯುವ ನಿಟ್ಟಿನಲ್ಲಿ ಗ್ರಾಮ ಪಂಚಾಯಿತಿ ಆಡಳಿತವು ದಿಟ್ಟ ಹೆಜ್ಜೆಯನ್ನಿಟ್ಟಿದೆ. ವಾರ್ಷಿಕ ಯೋಜನೆಯಲ್ಲಿ ಕಾದಿರಿಸಿದ ನಿಧಿಯಲ್ಲಿ ಬದಿಯಡ್ಕ ಪೇಟೆ, ಪೊಲೀಸ್ ಠಾಣೆಯಿಂದ ಮುಂದೆ ತಿರುವಿನಲ್ಲಿ ಹಾಗೂ ಇನ್ನಿತರ ಕಡೆಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸಲಾಗಿದೆ.
ಗ್ರಾಮ ಪಂಚಾಯಿತಿ ಅಧ್ಯಕ್ಷ ಡಿ.ಶಂಕರ ಅವರ ನೇತೃತ್ವದಲ್ಲಿ ಅಭಿವೃದ್ಧಿ ಸ್ಥಾಯಿಸಮಿತಿ ಅಧ್ಯಕ್ಷ ಹಮೀದ್ ಕೆಡೆಂಜಿ, ಕ್ಷೇಮಕಾರ್ಯ ಸ್ಥಾಯಿಸಮಿತಿ ಅಧ್ಯಕ್ಷೆ ರಜನಿ ಜಿ.ಆರ್., ಸದಸ್ಯ ಹರೀಶ್ ಕಿಳಿಂಗಾರ್ ಮತ್ತು ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಶೆಟ್ಟಿ ಬೇಳ ಇವರು ಕೆಲಸಕಾರ್ಯಗಳನ್ನು ಪರಿಶೀಲಿಸಿದರು.

.jpg)
