HEALTH TIPS

ಅಗ್ನಿಪಥ್ ಯೋಜನೆ-ಭಾರತೀಯ ವಾಯುಪಡೆಯ 'ಅಗ್ನಿವೀರ್‍ವಾಯು' ಗೆ ಆನ್‍ಲೈನ್ ಅರ್ಜಿ ಆಹ್ವಾನ

ಕಾಸರಗೋಡು: ಅಗ್ನಿಪಥ್ ಯೋಜನೆಯನ್ವಯ ಭಾರತೀಯ ವಾಯುಪಡೆಗೆ 'ಅಗ್ನಿವೀರ'ರಾಗಿ ಸೇರ್ಪಡೆಗೊಳ್ಳಲು ಅವಿವಾಹಿತ ಭಾರತೀಯ ಪುರುಷರು ಮತ್ತು ಮಹಿಳೆಯರಿಗೆ ಅವಕಾಶ ಕಲ್ಪಿಸಲಾಗಿದ್ದು,  ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಜುಲೈ 26ರ ವರೆಗೆ ಅರ್ಜಿಗಳನ್ನು ಸಲ್ಲಿಸಬಹುದು. ಆನ್‍ಲೈನ್ ಪರೀಕ್ಷೆಯು ಸೆಪ್ಟೆಂಬರ್ 22 ಮತ್ತು 23 ರಂದು ನಡೆಯಲಿದೆ. 

ಜುಲೈ 1, 2005 ರಿಂದ ಜನವರಿ 1, 2010 ರ ನಡುವೆ ಜನಿಸಿದ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಬಹುದು. ಗಣಿತ, ಭೌತಶಾಸ್ತ್ರ ಮತ್ತು ಇಂಗ್ಲಿಷ್ ಅನ್ನು ವಿಜ್ಞಾನ ವಿಷಯಗಳಾಗಿ ಕನಿಷ್ಠ ಶೇ. 50 ಅಂಕಗಳೊಂದಿಗೆ ಮತ್ತು ಇಂಗ್ಲಿಷ್‍ನಲ್ಲಿ ಶೇ. 50 ಅಂಕಗಳೊಂದಿಗೆ ಪ್ಲಸ್ ಟು ಅಥವಾ ಹೈಯರ್ ಸೆಕೆಂಡರಿಯಲ್ಲಿ ಉತ್ತೀರ್ಣರಾಗಿರಬೇಕು. ಅಥವಾ ಎಂಜಿನಿಯರಿಂಗ್ ಡಿಪೆÇ್ಲಮಾ ಯಾ ವೃತ್ತಿಪರ ಕೋರ್ಸ್ ಅನ್ನು ಯಶಸ್ವಿಯಾಗಿ ಪೂರ್ಣಗೊಳಿಸಿರಬೇಕು. ಇತರ ವಿಷಯಗಳಿಗೆ ಸಂಬಂಧಿಸಿದಂತೆ, ಅಭ್ಯರ್ಥಿಗಳು ಯಾವುದೇ ವಿಭಾಗದಲ್ಲಿ 'ಪ್ಲಸ್ ಟು'   ಅಥವಾ ಉನ್ನತ ಪ್ರೌಢ ಶಿಕ್ಷಣವನ್ನು ಪೂರ್ಣಗೊಳಿಸಿರಬೇಕು. ಇದರಲ್ಲಿ ಒಟ್ಟಾರೆಯಾಗಿ ಕನಿಷ್ಠ ಶೇ. 50 ಅಂಕಗಳು ಹಾಗೂ ಇಂಗ್ಲಿಷ್ ವಿಷಯದಲ್ಲಿ ಶೇ. 50ಅಂಕಗಳನ್ನು ಪಡೆದಿರುವುದು ಕಡ್ಡಾಯ. ಸೇವೆಯ ಅವಧಿಯು ನಾಲ್ಕು ವರ್ಷಗಳಾಗಿರುತ್ತದೆ. ಸೇವಾ ಅವಧಿಯಲ್ಲಿ, ಮಾಸಿಕ ವೇತನದ ಜತೆಗೆ 'ಸೇವಾನಿಧಿ' ಪ್ಯಾಕೇಜ್ ಮತ್ತು ಇತರ ಸೌಲಭ್ಯಗಳನ್ನು ಒದಗಿಸಲಾಗುತ್ತದೆ. 

ಆಯ್ಕೆ ಪ್ರಕ್ರಿಯೆಯು ಸಂಪೂರ್ಣ ಪಾರದರ್ಶಕವಾಗಿದ್ದು, ಅರ್ಹತೆಯ ಆಧಾರದ ಮೇಲೆ ನಡೆಯುತ್ತದೆ. ನೇಮಕಾತಿ ಪ್ರಕ್ರಿಯೆಗಾಗಿ ಯಾರಿಗೂ ಹಣ ಪಾವತಿಸುವ ಅಗತ್ಯವಿಲ್ಲ ಎಂದು ವಾಯುಪಡೆಯು ಎಚ್ಚರಿಕೆ ನೀಡಿದೆ ಮತ್ತು ಮೋಸದ ಏಜೆಂಟ್‍ಗಳ ಬಗ್ಗೆ ಎಚ್ಚರದಿಂದಿರುವಂತೆ ಅಭ್ಯರ್ಥಿಗಳಿಗೆ ಸಲಹೆ ನೀಡಿದೆ. ಆಸಕ್ತ ಅಭ್ಯರ್ಥಿಗಳು https://iafrecruitment.edcil.co.in  ಎಂಬ ಅಧಿಕೃತ ವೆಬ್‍ಸೈಟ್‍ಗೆ ಭೇಟಿ ನೀಡುವ ಮೂಲಕ ಆನ್‍ಲೈನ್‍ನಲ್ಲಿ ನೋಂದಾಯಿಸಿಕೊಳ್ಳಬೇಕು.   



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries