HEALTH TIPS

ಗೋಯಲ್ ಡೀಪ್‌ಫೇಕ್ ವಿಡಿಯೊ: ಸರ್ಕಾರದಿಂದ ಕ್ರಮ

ನವದೆಹಲಿ: ಕೇಂದ್ರ ಸಚಿವ ಪೀಯೂಷ್‌ ಗೋಯಲ್ ಅವರ ಎ.ಐ ನಿರ್ಮಿತ ಡೀಪ್‌ಫೇಕ್ ವಿಡಿಯೊಗಳಿಗೆ ಸಂಬಂಧಿಸಿದ ಹಲವು ಸಾಮಾಜಿಕ ಜಾಲತಾಣ ಲಿಂಕ್‌ಗಳನ್ನು ತೆಗೆದುಹಾಕಲಾಗಿದೆ ಎಂದು ಸರ್ಕಾರದ ಮೂಲಗಳು ಶನಿವಾರ ತಿಳಿಸಿವೆ.


ನೀಟ್‌ ಅಕ್ರಮವನ್ನು ಖಂಡಿಸಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಭಾಗಿಯಾಗಿರುವ ವಿದ್ಯಾರ್ಥಿಗಳಿಗೆ ಬೆದರಿಕೆ ಒಡ್ಡುವ ಹೇಳಿಕೆಗಳನ್ನು ಗೋಯಲ್ ನೀಡಿದ್ದಾರೆ ಎಂದು ಬಿಂಬಿಸುವ ರೀತಿಯಲ್ಲಿ ಡೀಪ್‌ಫೇಕ್ ವಿಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ಬೆನ್ನಲ್ಲೇ ಈ ಕ್ರಮ ಕೈಗೊಳ್ಳಲಾಗಿದೆ.

ಈ ಬಗ್ಗೆ ಶನಿವಾರ 'ಎಕ್ಸ್‌'ನಲ್ಲಿ ಪೋಸ್ಟ್‌ ಮಾಡಿದ ಗೋಯಲ್, 'ಸಾರ್ವಜನಿಕರನ್ನು ದಾರಿ ತಪ್ಪಿಸಲು ಕೃತಕ ಬುದ್ಧಿಮತ್ತೆಯ ದುರ್ಬಳಕೆ ಮಾಡುವುದನ್ನು ಸಹಿಸಲು ಸಾಧ್ಯವಿಲ್ಲ' ಎಂದು ಹೇಳಿದರು.

'ಈ ಬಗ್ಗೆ ದೆಹಲಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದೇನೆ. ನಕಲಿ ವಿಡಿಯೊಗಳನ್ನು ಸೃಷ್ಟಿಸಿ, ಹಂಚುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುತ್ತದೆ' ಎಂದು ತಿಳಿಸಿದರು. 



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries