ಕುಂಬಳೆ: ಮುಜುಂಗಾವು ಶ್ರೀ ಭಾರತೀ ವಿದ್ಯಾಪೀಠದಲ್ಲಿ 2026- 27 ನೇ ಶೈಕ್ಷಣಿಕ ವರ್ಷದ ಪ್ರತಿಭಾ ಭಾರತಿ ಮತ್ತು ವಿವಿಧ ಸಂಘಗಳ ಉಧ್ಘಾಟನಾ ಕಾರ್ಯಕ್ರಮವು ಗುರುವಾರ ಜರಗಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ, ಬದಿಯಡ್ಕ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಹಾಗೂ ಸಮಾಜ ಸೇವಕ ಸಾಯಿರಾಂ ಕೆ. ಎನ್.ಕೃಷ್ಣ ಭಟ್ ಕಿಳಿಂಗಾರು ಮಾತನಾಡಿ, ಆದರ್ಶ ಜೀವನಕ್ಕೆ ಮೌಲ್ಯಯುತ ಶಿಕ್ಷಣದ ಅಗತ್ಯ ಇಂದಿನ ಜನಾಂಗಕ್ಕಿದೆ. ನಮ್ಮ ವಿದ್ಯಾಲಯವು ಈ ವಿಷಯದಲ್ಲಿ ಮುಂಚೂಣಿಯಲ್ಲಿದೆ ಎಂದು ಸಂತಸ ವ್ಯಕ್ತಪಡಿಸಿದರು.
ಹತ್ತನೇ ತರಗತಿಯ ಶಾಶ್ವತ್.ಕೆ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳು ಈ ಸಂದರ್ಭದಲ್ಲಿ ನಡೆಯಿತು. ಶಾಲಾ ಆಡಳಿತ ಸಮಿತಿಯ ಅಧ್ಯಕ್ಷ ಸುಬ್ರಹ್ಮಣ್ಯ ಭಟ್ ಬೆಜಪ್ಪೆ , ಆಡಳಿತ ಸೇವಾಸಮಿತಿಯ ಕಾರ್ಯದರ್ಶಿ ಎಚ್.ಎಸ್ ಪ್ರಸಾದ್, ಜತೆ ಕಾರ್ಯದರ್ಶಿ ಬಾಲಕೃಷ್ಣ ಶರ್ಮ ಅನಂತಪುರ, ಶಾಲಾ ಮುಖ್ಯೋಪಾಧ್ಯಾಯ ಶ್ಯಾಮ್ ಭಟ್ ದರ್ಬೆಮಾರ್ಗ ಹಾಗೂ ಸಹ ಮುಖ್ಯ ಶಿಕ್ಷಕಿ ಚಿತ್ರಾಸರಸ್ವತಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಒಂಬತ್ತನೆ ತರಗತಿಯ ಕಿಶೋರ ಕೃಷ್ಣ ಸ್ವಾಗತಿಸಿ, ಕು. ಪ್ರೇರಣಾ ವಂದಿಸಿದಳು. ವಿದ್ಯಾರ್ಥಿಗಳಾದ ಭವಿಷ್ ಹಾಗೂ ರೋಹನ್ ಕಾರ್ಯಕ್ರಮವನ್ನು ನಿರೂಪಿಸಿದರು. ಅಧ್ಯಾಪಕರಾದ ಹರಿಪ್ರಸಾದ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಅಧ್ಯಾಪಕ ವೃಂದ ಕಾರ್ಯಕ್ರಮದ ನೇತೃತ್ವವನ್ನು ವಹಿಸಿ, ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.




