HEALTH TIPS

ಕುತೂಹಲ ಮೂಡಿಸಿದ ಧರ್ಮೇಂದ್ರ ಪ್ರಧಾನ್, ಅಮಿತ್ ಶಾ ಭೇಟಿ

 ನವದೆಹಲಿ:ನೀಟ್ ಪರೀಕ್ಷಾ ಅಕ್ರಮದ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಸಲ್ಲಿಸಬೇಕು ಎಂದು ಆಗ್ರಹಿಸಿ ಕಾಕ್ರೋಚ್ ಜನತಾ ಪಾರ್ಟಿ ಇಂದು 'ಸಂಸತ್ ಚಲೋ' ಹಮ್ಮಿಕೊಂಡಿರುವ ಬೆನ್ನಿಗೇ, ಧರ್ಮೇಂದ್ರ ಪ್ರಧಾನ್ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನು ಭೇಟಿಯಾಗಿರುವುದು ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ. 


ಸಂಸತ್ತಿನ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭಗೊಂಡಿದ್ದು, ಲೋಕಸಭೆ ಮತ್ತು ರಾಜ್ಯಸಭೆಗಳೆರಡರಲ್ಲೂ ನೀಟ್ ಪರೀಕ್ಷಾ ಅಕ್ರಮದ ವಿರುದ್ಧ ವಿರೋಧ ಪಕ್ಷಗಳು ಪ್ರತಿಭಟನೆ ನಡೆಸಿವೆ. ಇದೇ ವೇಳೆ ಕಳೆದ ಒಂದು ತಿಂಗಳಿನಿಂದ ನೀಟ್ ಪರೀಕ್ಷಾ ಅಕ್ರಮದ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್ ಜನತಾ ಪಾರ್ಟಿ, ಇಂದು ಸಂಸತ್ ಚಲೋ ಹಮ್ಮಿಕೊಂಡಿದೆ. ಇದಕ್ಕೆ ಭಾರಿ ಸಾರ್ವಜನಿಕ ಬೆಂಬಲ ವ್ಯಕ್ತವಾಗಿದ್ದು, ಈ ಪ್ರತಿಭಟನೆಯಲ್ಲಿ ಸುಮಾರು 10,000ಕ್ಕೂ ಹೆಚ್ಚು ಮಂದಿ ಪಾಲ್ಗೊಂಡಿದ್ದಾರೆ ಎಂದು ವರದಿಯಾಗಿದೆ.

ಈ ಹಿನ್ನೆಲೆಯಲ್ಲಿ ಧರ್ಮೇಂದ್ರ ಪ್ರಧಾನ್ ಹಾಗೂ ಅಮಿತ್ ಶಾ ಭೇಟಿ ಮಹತ್ವ ಪಡೆದುಕೊಂಡಿದೆ. 


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries