HEALTH TIPS

ಅಭಿಜಿತ್ ದೀಪ್ಕೆ ಪೊಲೀಸ್ ವಶಕ್ಕೆ, ಪ್ರತಿಭಟನೆ ಹತ್ತಿಕ್ಕಲು ಲಾಠಿಚಾರ್ಜ್: ಸಿಜೆಪಿ

 ನವದೆಹಲಿ: ಕೇಂದ್ರ ಸಚಿವ ಜೆ.ಪಿ. ನಡ್ಡಾ ಅವರೊಂದಿಗೆ ಮಾತುಕತೆ ನಡೆಯುತ್ತಿದ್ದ ಸಂದರ್ಭದಲ್ಲೇ ಪಕ್ಷದ ಸಂಸ್ಥಾಪಕ ಅಭಿಜೀತ್‌ ದೀಪ್ಕೆ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಕಾಕ್ರೋಚ್‌ ಜನತಾ ಪಕ್ಷ (ಸಿಜೆಪಿ) ಸೋಮವಾರ ಆರೋಪಿಸಿದೆ. 

ಶಿಕ್ಷಣ ಸಚಿವ ಧರ್ಮೇಮದ್ರ ಪ್ರಧಾನ್‌ ರಾಜೀನಾಮೆಗೆ ಒತ್ತಾಯಿಸಿ ಒಂದು ತಿಂಗಳಿನಿಂದ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಸಿಜೆಪಿ, ಇಂದು (ಜುಲೈ 20) 'ಸಂಸತ್‌ ಚಲೊ' ಮೆರವಣಿಗೆ ಹಮ್ಮಿಕೊಂಡಿದೆ.

ಹೀಗಾಗಿ, ಸಿಜೆಪಿ ಪ್ರತಿನಿಧಿಗಳ ಜೊತೆ ಮಾತುಕತೆ ನಡೆಸಲು ಕೇಂದ್ರ ಸರ್ಕಾರ ಮುಂದಾಗಿದೆ.

'ನಾವು ನಡ್ಡಾ ಅವರಿಗೆ ಲಿಖಿತ ಪತ್ರ ಸಲ್ಲಿಸಿದ್ದೇವೆ. ಅವರು ಮಾತುಕತೆಯ ಭರವಸೆ ನೀಡಿದ್ದಾರೆ. ಅದಕ್ಕೆ ಸಂಬಂಧಿಸಿದ ಪ್ರಕ್ರಿಯೆಗಳು ನಡೆಯುತ್ತಿವೆ' ಎಂದು ಸಿಜೆಪಿ ವಕ್ತಾರ ಸೌರವ್‌ ದಾಸ್‌ ತಿಳಿಸಿದ್ದಾರೆ.

ಸಿಜೆಪಿ ಸಂಸ್ಥಾಪಕರನ್ನು ಪೊಲೀಸರು ವಶಕ್ಕೆ ಪಡೆದಿರುವ ಬಗ್ಗೆಯೂ ಮಾಹಿತಿ ನೀಡಿರುವ ದಾಸ್‌, 'ಪೊಲೀಸರು ದೀಪ್ಕೆ ಅವರನ್ನು ವಶಕ್ಕೆ ಪಡೆದಿದ್ದಾರೆ! ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳ ಪರ ಎಲ್ಲ ಸಂಸದರೂ ಕೂಡಲೇ ನಿಲ್ಲುವಂತೆ ಮನವಿ ಮಾಡುತ್ತೇನೆ. ಶಾಂತಿಯುತವಾಗಿ ನಡೆಯುತ್ತಿರುವ ಪ್ರತಿಭಟನೆಯನ್ನು ಪೊಲೀಸರು ಕ್ರೂರವಾಗಿ ಹತ್ತಿಕ್ಕಲು ಪ್ರಯತ್ತಿಸುತ್ತಿದ್ದಾರೆ. ಲಾಠಿಚಾರ್ಜ್‌ ಮಾಡುತ್ತಿದ್ದಾರೆ' ಎಂದು ಆರೋಪಿಸಿದ್ದಾರೆ. 







ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries